ಮಡಿಕೇರಿಯ ಅಲುಫ್ ಚಾಂಪಿಯನ್

aluf champion
Published on

ಮಡಿಕೇರಿ: ದುಬೈಯಲ್ಲಿ ಇತ್ತೀಚೆಗೆ ನಡೆದ ಅಂತರಾಷ್ಟ್ರೀಯ ಮಟ್ಟದ ೧೨ನೇ ಬ್ರೈನೋಬ್ರೈನ್ ಚಾಂಪಿಯನ್ ಸ್ಪರ್ಧೆಯಲ್ಲಿ ಮಡಿಕೇರಿಯ ಎ.ಆರ್.ಅಲುಫ್(೯) ಜೂನಿಯರ್ ವಿಭಾಗದಲ್ಲಿ ಚಾಂಪಿಯನ್ ಆಗಿ ಹೊರ ಹೊಮ್ಮಿದ್ದಾರೆ.

ದುಬೈನ ಶೇಖ್ ರಶೀದ್ ಸಭಾಂಗಣದಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಈ ಸ್ಪರ್ಧೆಯಲ್ಲಿ ೧೮ ದೇಶಗಳ ೨೦೩೬ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಕರ್ನಾಟಕ ರಾಜ್ಯದಿಂದ ಐವರು ಸ್ಪರ್ಧಿಸಿದ್ದು, ಇವರಲ್ಲಿ ಎ.ಆರ್.ಅಲುಫ್ ಒಬ್ಬರಾಗಿದ್ದರು. ಮಾಪಂಗಡ ಕವಿತಾ ಕರುಂಬಯ್ಯ ಅವರ ಮಡಿಕೇರಿಯ ಬ್ರೈನೋಬ್ರೈನ್ ಅಬಾಕಾಸ್ ಸಂಸ್ಥೆಯಲ್ಲಿ ಎ.ಆರ್.ಅಲುಫ್ ತರಬೇತಿ ಪಡೆಯುತ್ತಿದ್ದಾನೆ. ಈತ ಉದ್ಯಮಿ ರಫೀಕ್ ಹಾಗೂ ಸಬೀನ ದಂಪತಿಯ ಪುತ್ರನಾಗಿದ್ದು, ಮಡಿಕೇರಿಯ ಸಂತ ಮೈಕಲರ ಶಾಲೆಯ ೪ನೇ ತರಗತಿ ವಿದ್ಯಾರ್ಥಿಯಾಗಿದ್ದಾನೆ.

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಬ್ರೈನೋಬ್ರೈನ್ ಅಂತರಾಷ್ಟ್ರೀಯ ದುಬೈ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಆನಂದ್ ಸುಬ್ರಮಣ್ಯಂ, ತಾಂತ್ರಿಕ ನಿರ್ದೇಶಕ ಅರುಳ್ ಸುಬ್ರಹ್ಮಣ್ಯಂ ಉಪಸ್ಥಿತರಿದ್ದು, ಅಲುಫ್ ಸಾಧನೆಗೆ ಶ್ಲಾಘನೆ ವ್ಯಕ್ತಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net