

ಮೂಡುಬಿದಿರೆ: ಬ್ರಹ್ಮಾವರ ಸೇಂಟ್ ಮೇರಿಸ್ ಸಿರಿಯನ್ ಕಾಲೇಜು ಹಾಗೂ ಮಂಗಳೂರು ವಿವಿ ಆಶ್ರಯದಲ್ಲಿ ನಡೆದ ಮಂಗಳೂರು ವಿವಿ ಅಂತರ್ ಕಾಲೇಜು ಉಡುಪಿ ವಲಯ ಕ್ರಿಕೆಟ್ ಪಂದ್ಯಾಟದಲ್ಲಿ ಆಳ್ವಾಸ್ ಕಾಲೇಜಿನ ಕ್ರಿಕೆಟ್ ತಂಡ ಜಯಶಾಲಿಯಾಗಿದೆ.
ಫೈನಲ್ ಪಂದ್ಯದಲ್ಲಿ ಕುಂದಾಪುರದ ಬಿಬಿ ಹೆಗ್ಡೆ ಕಾಲೇಜಿನ ತಂಡವನ್ನು 8 ವಿಕೆಟ್‌ಗಳ ಅಂತರದಿಂದ ಗೆದ್ದು, ಶಿರ್ವ ಲೆಸ್ಲಿ ಡಿಸೋಜ ಮೆಮೋರಿಯಲ್ ರೋಲಿಂಗ್ ಟ್ರೋಫಿ ತನ್ನದಾಗಿಸಿಕೊಂಡಿತು. ಸೆಮಿಫೈನಲ್ ಪಂದ್ಯದಲ್ಲಿ ಬ್ರಹ್ಮಾವರದ ಎಸ್‌ಎಂಎಸ್ ಕಾಲೇಜಿನ ತಂಡದ ವಿರುದ್ಧ 23 ರನ್‌ಗಳ ಅಂತರದಲ್ಲಿ ಗೆದ್ದು ಫೈನಲ್ ಪ್ರವೇಶಿಸಿತ್ತು. ಆಳ್ವಾಸ್ ಕಾಲೇಜಿನ ಜಿಷ್ಣು ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು. ವಿಜೇತ ತಂಡವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಅಭಿನಂದಿಸಿದ್ದಾರೆ.