ಆಳ್ವಾಸ್‌ಗೆ ಸತತ 4ನೇ ಬಾರಿ ಚಾಂಪಿಯನ್ ಪಟ್ಟ

Mbd_Kabaddi
Published on

ಮೂಡುಬಿದಿರೆ: ಮಂಗಳೂರು ವಿವಿ ಮತ್ತು ಬೆಸೆಂಟ್ ಮಹಿಳೆಯರ ಕಾಲೇಜು ಸಂಯುಕ್ತಾಶ್ರಯದಲ್ಲಿ ನಡೆದ ಅಂತರ್ ಕಾಲೇಜು ಮಹಿಳೆಯರ ಕಬಡ್ಡಿ ಚಾಂಪಿಯನ್‌ಷಿಪ್‌ನಲ್ಲಿ ಆಳ್ವಾಸ್ ಕಾಲೇಜಿನ ಮಹಿಳೆಯರ ತಂಡ ಸತತ 4ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿತು.

ಆಳ್ವಾಸ್ ಕಾಲೇಜು ತಂಡ ವಾಮದಪದವಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತಂಡವನ್ನು ಹಾಗೂ ಉಜಿರೆಯ ಎಸ್‌ಡಿಎಂ ಕಾಲೇಜು ತಂಡ ಅಜ್ಜರಕಾಡಿನ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ತಂಡವನ್ನು ಸೋಲಿಸಿ ಫೈನಲ್ ಹಂತಕ್ಕೆ ತೇರ್ಗಡೆಗೊಂಡವು. ಫೈನಲ್ ಪಂದ್ಯಾಟದಲ್ಲಿ ಆಳ್ವಾಸ್ ತಂಡ ಎಸ್‌ಡಿಎಂ ಕಾಲೇಜು ತಂಡವನ್ನು 29-14 ಅಂತರದಲ್ಲಿ ಸೋಲಿಸಿ ವೆರಿ ರೆವೆರೆಂಡ್ ಮೆಸೆಂಜರ್ ಎ ಪತ್ರಾವೋ ಮೆಮೋರಿಯಲ್ ರೋಲಿಂಗ್ ಟ್ರೋಫಿ ಹಾಗೂ ಶಾಶ್ವತ ಫಲಕ ಪಡೆದುಕೊಂಡಿತು.

ಆಳ್ವಾಸ್ ತಂಡದ ಸುಶ್ಮಿತಾ ಸರ್ವಾಂಗೀಣ ಆಟಗಾರ್ತಿ ಪ್ರಶಸ್ತಿ ಪಡೆದರೆ, ಧನಲಕ್ಷ್ಮೀ ಉತ್ತಮ ದಾಳಿಗಾರ್ತಿ ಮತ್ತು ಎಸ್‌ಡಿಎಂ ತಂಡದ ಸುಮಯ್ಯ ಉತ್ತಮ ಹಿಡಿತಗಾರ್ತಿ ಪ್ರಶಸ್ತಿ ಪಡೆದುಕೊಂಡರು. ವಿಜೇತ ತಂಡವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಅಭಿನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net