

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಶ್ರಯದಲ್ಲಿ ಆಳ್ವಾಸ್ ನುಡಿಸಿರಿ 2022 ಕನ್ನಡ ನಾಡು-ನುಡಿ-ಸಂಸ್ಕೃತಿಯ ರಾಷ್ಟ್ರೀಯ ಸಮ್ಮೇಳನವನ್ನು ಡಿ.16, 17 ಮತ್ತು 18ರ ಬದಲು 2022 ಡಿಸೆಂಬರ್ 21, 22 ಮತ್ತು 23ರಂದು ನಡೆಸಲು ತೀರ್ಮಾನಿಸಲಾಗಿದೆ. ಇದೇ ಸಂದರ್ಭದಲ್ಲಿ ಸ್ಕೌಟ್ಸ್ ಗೈಡ್ಸ್ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ ಆಯೋಜಿಸಲಾಗುತ್ತಿದ್ದು, ಎರಡೂ ಕಾರ್ಯಕ್ರಮಗಳು ಪರಸ್ಪರ ಪೂರಕವಾಗಿ ಏಕಕಾಲದಲ್ಲಿ ನಡೆದರೆ ಅದರಿಂದ ಹೆಚ್ಚಿನ ಪ್ರಯೋಜನ ದೊರೆಯಲಿದೆ. ಈ ಹಿನ್ನೆಲೆಯಿಂದ ಕಾರ್ಯಕಾರಿ ಸಮಿತಿಯ ತೀರ್ಮಾನದಂತೆ ಆಳ್ವಾಸ್ ನುಡಿಸಿರಿ ಸಮ್ಮೇಳನವದ ಬದಲಾದ ದಿನಾಂಕವನ್ನು ಗಮನಿಸಿ ಸಹಕರಿಸುವಂತೆ ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.