ಕ್ರಿಯಾಶೀಲತೆ ಗುರಿ ಸಾಧನೆಗಿರುವ ದಾರಿ : ಚಟುವಟಿಕೆ ಉದ್ಘಾಟಿಸಿ ಡಾ.ಗ್ರೀಷ್ಮಾ ಆಳ್ವ ಹೇಳಿಕೆ

01
Published on

ಮೂಡುಬಿದಿರೆ: ಪಿಯುಸಿ ಹಂತ ವಿದ್ಯಾರ್ಥಿಗಳ ಜೀವನದ ಅತ್ಯಂತ ಮಹತ್ವದ ಘಟ್ಟ. ಈ ಅವಧಿಯಲ್ಲಿ ಪ್ರತಿಯೊಬ್ಬರೂ ತಮ್ಮ ಗುರಿ ಸಾಧಿಸಲು ಕ್ರಿಯಾಶೀಲರಾಗಬೇಕು. ನಿಜವಾದ ಕ್ರಿಯಾಶೀಲತೆಯೇ ಯಶಸ್ಸಿನ ದಾರಿ ತೆರೆದಿಡುತ್ತದೆ ಎಂದು ಆಳ್ವಾ ಫಾರ್ಮಸಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಗ್ರೀಷ್ಮಾ ಆಳ್ವ ಹೇಳಿದರು.

ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ನಡೆದ ಆಳ್ವಾಸ್ ಪದವಿಪೂರ್ವ ಕಾಲೇಜಿನ ಮಹಿಳಾ ಕ್ಷೇಮಪಾಲನಾ ಸಮಿತಿ ಹಾಗೂ ಆಂತರಿಕ ಸಮಿತಿ 2025-26ರ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದರು.

ಆಳ್ವಾಸ್ ಪಿಯು ಕಾಲೇಜಿನ ಉಪಪ್ರಾಂಶುಪಾಲೆ ಝಾನ್ಸಿ ಪಿ.ಎನ್. ಅಧ್ಯಕ್ಷತೆ ವಹಿಸಿದರು. ವಾಣಿಜ್ಯ ವಿಭಾಗದ ಡೀನ್ ಪ್ರಶಾಂತ್ ಎಂ.ಡಿ., ಮಹಿಳಾ ಕ್ಷೇಮಪಾಲನಾ ಸಮಿತಿ ಸಂಯೋಜಕಿ ಕೀರ್ತನಾ ಶೆಟ್ಟಿ, ಆಂತರಿಕ ಸಮಿತಿ ಸಂಯೋಜಕಿ ಡಾ.ಸುಲತಾ ವಿದ್ಯಾಧರ್ ಇದ್ದರು. ವಿದ್ಯಾರ್ಥಿನಿ ಮಧು ಕಾರ್ಯಕ್ರಮ ನಿರೂಪಿಸಿದರು. ನಿಧಿ ಸ್ವಾಗತಿಸಿದರು. ಪೂರ್ವಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net