

ಮೂಡುಬಿದಿರೆ: ದ.ಕ. ಅಥ್ಲೆಟಿಕ್ಸ್ ಸಂಸ್ಥೆ ವತಿಯಿಂದ ನಡೆದ ದ.ಕ. ಕಿರಿಯರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್ ವಿದ್ಯಾರ್ಥಿಗಳು 22 ಚಿನ್ನ, 21 ಬೆಳ್ಳಿ, 12 ಕಂಚಿನ ಪದಕದೊಂದಿಗೆ ಒಟ್ಟು 55 ಪದಕ ಪಡೆದಿದ್ದಾರೆ.
ಉಡುಪಿ ಜಿಲ್ಲೆಯ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ರಾಜ್ಯಮಟ್ಟದ ಕಿರಿಯರ ಹಿರಿಯರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್ನಿಂದ ಕಿರಿಯರ ವಿಭಾಗದಲ್ಲಿ 60 ವಿದ್ಯಾರ್ಥಿಗಳು ಹಾಗೂ ಹಿರಿಯರ ವಿಭಾಗದಲ್ಲಿ 30 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 90 ಕ್ರೀಡಾಪಟುಗಳು ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ. ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ದ.ಕ. ಜಿಲ್ಲೆ ಪ್ರತಿನಿಧಿಸುತ್ತಿರುವ ಕ್ರೀಡಾಪಟುಗಳಲ್ಲಿ ಅತಿಹೆಚ್ಚು ಕ್ರೀಡಾಪಟುಗಳು ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್ನವರಾಗಿದ್ದಾರೆ. ಸಾಧಕ ಕ್ರೀಡಾಪಟುಗಳನ್ನು ಸಂಸ್ಥೆ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಅಭಿನಂದಿಸಿದ್ದಾರೆ.