ಶಾಲೆಗಳ ಅಭಿವೃದ್ಧಿಗೆ ಸದಾ ಸಿದ್ಧ

8blh1 minister news
filter: 0; fileterIntensity: 0.0; filterMask: 0; hdrForward: 0; highlight: true; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (-1.0, -1.0);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;HdrStatus: auto;albedo: ;confidence: ;motionLevel: -1;weatherinfo: null;temperature: 48;
Published on

ಬೈಲಹೊಂಗಲ: ದೇಶ ಮುನ್ನಡೆಸುವ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿ ವಿಚಾರದಲ್ಲಿ ಅನುದಾನ ನೀಡಲು ಯಾವುದೇ ಕಾರಣಕ್ಕೂ ಹಿಂದೇಟು ಹಾಕಿಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವ ಮಧು ಬಂಗಾರಪ್ಪ ಹೇಳಿದರು.

ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕೊಠಡಿಗಳ ಉದ್ಘಾಟನೆ, ಕ್ರೀಡೆ ಮತ್ತು ಸಾಂಸ್ಕೃತಿಕ ಹಾಗೂ ಎನ್‌ಎಸ್‌ಎಸ್ ಚುಟುವಟಿಕೆಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ದೇವಸ್ಥಾನಗಳಿಗಿಂತ ಹೆಚ್ಚಾಗಿ ಶಾಲೆಗಳಿಗೆ ಅನುದಾನ ನೀಡಬೇಕು. ಶಿಕ್ಷಣ ಅಭಿವೃದ್ಧಿಯೇ ದೇಶದ ಅಭಿವೃದ್ಧಿಯಾಗಿದೆ. 2023ರಲ್ಲಿ ನಮ್ಮ ಸರ್ಕಾರ ಬಂದಾಗಿನಿಂದ ಸರ್ಕಾರಿ ಶಾಲೆಗಳಿಗೆ ಪುಕ್ಕಟೆ ಕರೆಂಟ್ ನೀಡಲಾಗುತ್ತಿದೆ. ರಾಜ್ಯದಲ್ಲಿ 25 ಸಾವಿರ ಮಕ್ಕಳಿಗೆ ನೀಟ್, ಸಿಇಟಿ ಕೋಚಿಂಗ್ ವ್ಯವಸ್ಥೆ ಮಾಡಲಾಗಿದೆ. ಶಾಲೆಗಳ ಅಭಿವೃದ್ಧಿಗೆ ಯಾವುದೇ ಸಹಕಾರ ಬೇಕಾದರೂ ಮಾಡಲು ಸಿದ್ಧನಿದ್ದೇನೆ ಎಂದರು.

ಶಾಸಕ ಮಹಾಂತೇಶ ಕೌಜಲಗಿ ಮಾತನಾಡಿ, ಮನುಷ್ಯನಿಗೆ ಶಿಕ್ಷಣವೇ ಮುಖ್ಯ ಆಧಾರವಾಗಿದೆ. ಇಂದು ಸರ್ಕಾರ ಶಿಕ್ಷಣ ಅಭಿವದ್ಧಿಗೆ ಟೊಂಕ ಕಟ್ಟಿ ನಿಂತು ಕಾರ್ಯನಿರ್ವಹಿಸುತ್ತಿದೆ. ಕಾಲೇಜು ಇನ್ನಷ್ಟು ಅಭಿವದ್ಧಿ ಹೊಂದಲಿದೆ ಎಂದರು.

ಸಚಿವರು ಬೈಲಹೊಂಗಲ ಪಟ್ಟಣದಲ್ಲಿ ಗುರುಭವನ ಹಾಗೂ ತಾಲೂಕಿನ ವಕ್ಕುಂದ ಗ್ರಾಮದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಯ ಕೊಠಡಿಗಳ ಉದ್ಘಾಟನೆ ಮಾಡಿದರು. ಸಚಿವರು ವಕ್ಕುಂದ ಗ್ರಾಮದಲ್ಲಿ ಮಕ್ಕಳೊಂದಿಗೆ ಊಟ ಸವಿದರು. 2 ಲಕ್ಷ ರೂ. ಪಠ್ಯಪುಸ್ತಕ ದೇಣಿಗೆ ನೀಡಿದ ರಾಜು ಮೆಟಗುಡ್ಡ, ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸತ್ಕರಿಸಲಾಯಿತು.

ಉಪನ್ಯಾಸಕ ಬಿ.ಎಂ. ಕೊಳವಿ ಪ್ರಾಸ್ತಾವಿಕ ಮಾತನಾಡಿದರು. ಪುರಸಭೆ ಅಧ್ಯಕ್ಷ ವಿಜಯ ಬೋಳನ್ನವರ, ಎಸಿ ಪ್ರವೀಣ ಜೈನ್, ಡಿವೈಎಸ್‌ಪಿ ವೀರಯ್ಯ ಹಿರೇಮಠ, ಶಾಲಾ ಅಭಿವದ್ಧಿ ಉಪಾಧ್ಯಕ್ಷ ಅಶೋಕ ವಾಲಿ, ಡಿಡಿಪಿಯು ಎನ್.ಎಂ.ಕಾಂಬಳೆ, ಡಿಡಿಪಿಐ ಲೀಲಾವತಿ ಹಿರೇಮಠ, ಜಯಶ್ರೀ ಶಿಂತ್ರಿ, ತಾಪಂ ಸಿಇಒ ಸಂಜೀವ ಜುನ್ನೂರ, ಪ್ರಾಂಶುಪಾಲ ಎನ್.ಎಂ. ಕುದರಿಮೂತಿ, ಬಿಇಒ ಎ.ಎನ್. ಪ್ಯಾಟಿ, ತಹಸೀಲ್ದಾರ್ ಹಣಮಂತ ಶಿರಹಟ್ಟಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net