

ಚಿಕ್ಕಮಗಳೂರು: ಕನ್ನಡ ಕೆಲಸಗಳಿಗೆ ಸದಾ ಸ್ಪಂದಿಸುತ್ತೇನೆ. ಕನ್ನಡ ಕೆಲಸ ಕೇವಲ ನವೆಂಬರ್ ತಿಂಗಳಿಗೆ ಮಾತ್ರ ಸೀಮಿತವಾಗಬಾರದು. ಕನ್ನಡವನ್ನು ಕಟ್ಟವ ಕೆಲಸ ನಿರಂತರ ಪ್ರಕ್ರಿಯೆಯಾಗಬೇಕು ಎಂದು ನಗರಸಭೆ ಅಧ್ಯಕ್ಷೆ ಸುಜಾತಾ ಶಿವಕುಮಾರ್ ತಿಳಿಸಿದರು.
ಕನ್ನಡ ಸಾಹಿತ್ಯ ಪರಿಷತ್‌ನಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಕನ್ನಡ ಸಾಹಿತ್ಯ ಪರಿಷತ್ ಕನ್ನಡವನ್ನು ಬೆಳೆಸುವ ನಿಟ್ಟಿನಲ್ಲಿ ಹತ್ತು ಹಲವು ಸಾಹಿತ್ಯಾತ್ಮಕ ಚಟುವಟಿಕೆ ನಡೆಸುತ್ತಿದೆ. ಕನ್ನಡದ ಕೆಲಸಗಳಿಗೆ ತಾವೂ ಕೈಜೋಡಿಸುವ ಭರವಸೆ ನೀಡಿದರು.
ಕನ್ನಡ ಭವನದ ನವೀಕರಣ ಕಾರ್ಯಕ್ಕೆ ಕೈಜೋಡಿಸುವುದಾಗಿ ತಿಳಿಸಿದ ಅವರು ಮುಂಬರುವ ದಿನಗಳಲ್ಲಿ ನಡೆಯುವ ಚಿಕ್ಕಮಗಳೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಎಲ್ಲಾ ಸಹಕಾರ ನೀಡುವುದಾಗಿ ತಿಳಿಸಿದರು.
ಇದೇ ಸಂದರ್ಭದಲ್ಲಿ ನಗರಸಭೆ ಉಪಾಧ್ಯಕ್ಷೆ ಅನು ಮಧುಕರ್ ಅವರನ್ನು ಅಭಿನಂದಿಸಲಾಯಿತು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸೂರಿಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿ ಎಸ್.ಎಸ್.ವೆಂಕಟೇಶ್, ಚಿಕ್ಕಮಗಳೂರು ತಾಲೂಕು ಅಧ್ಯಕ್ಷ ಬಿ.ಎಚ್.ಸೋಮಶೇಖರ್, ಮಹಿಳಾ ಘಟಕದ ಅಧ್ಯಕ್ಷೆ ವಿಜಯಲಕ್ಷಿö್ಮÃ ವಿಶ್ವನಾಥ್, ಕಸಾಪ ಕಾರ್ಯದರ್ಶಿ ಎಚ್.ಆರ್.ಕಾಂತರಾಜ್, ನಗರ ಘಟಕ ಅಧ್ಯಕ್ಷ ಸಚಿನ್ ಸಿಂಗ್, ಮಹಿಳಾ ಘಟಕದ ಕಾರ್ಯದರ್ಶಿ ಶೈಲಜಾ ಬಸವರಾಜು, ಸಾವಿತ್ರಿ ಶಿವಕುಮಾರ್ ಮತ್ತಿತರರಿದ್ದರು.