

ಹಾವೇರಿ: ನಮ್ಮಲ್ಲಿ ಹೂಡಿಕೆ ಮಾಡಿದರೆ ನಿತ್ಯವೂ ಲಾಭಾಂಶ ನೀಡಲಾಗುವುದು ಎಂದು ನಂಬಿಸಿ ವ್ಯಕ್ತಿಯೊಬ್ಬನಿಂದ 2.16 ಲಕ್ಷ ರೂ. ಹಾಕಿಸಿಕೊಂಡು ವಂಚಿಸಿರುವ ಕುರಿತು ಇಲ್ಲಿಯ ಸೈಬರ್ ಕೆಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಲ್ಲಿಯ ಬಸವೇಶ್ವರ ನಗರದ ಪ್ರವಿಣ ಗುಡ್ಡಪ್ಪ ಮಡಿವಾಳರ (33) ಎಂಬುವರಿಗೆ ಮೋಸ ಮಾಡಿರುವುದು.
ಇವರಿಗೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ ನಮ್ಮಲ್ಲಿ ಹಣ ಹೂಡಿಕೆ ಮಾಡಿದರೆ ನಿತ್ಯ ಲಾಭಾಂಶ ಕೊಡುವುದಾಗಿ ಹೇಳಿ ಅವರ ವಿವಿಧ ಖಾತೆಗಳಿಂದ 2.16 ಲಕ್ಷ ರೂ. ಹಾಕಿಸಿಕೊಂಡು ವಂಚಿಸಿದ್ದಾನೆ ಎನ್ನಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.