ಕನ್ನಡ ಉಳಿಸಿ, ಬೆಳೆಸಲು ನಾನು ಬದ್ಧ

28
Published on

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೂಲಕ ಕನ್ನಡವನ್ನು ಉಳಿಸಿ, ಬೆಳೆಸುವುದಕ್ಕೆ ಬದ್ಧನಾಗಿದ್ದೇನೆ ಎಂದು ಹಿಂದುಳಿದ ವರ್ಗಗಳ ಅಭಿವೃದ್ಧಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ಎಸ್.ತಂಗಡಗಿ ಹೇಳಿದರು.

ನಗರದ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಗರ ಹಾಗೂ ಜಿಲ್ಲಾ ಕಾಂಗ್ರೆಸ್ ಘಟಕದಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ನನ್ನ ಅವಧಿಯಲ್ಲಿ ಕನ್ನಡ ಸೇವೆ ಮಾಡಲು ಪ್ರಯತ್ನಿಸುತ್ತೇನೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಹಾಗೂ ವಿಶ್ವಪ್ರಸಿದ್ಧ ಮೈಸೂರಿಗೆ ಆಗಮಿಸುವುದೆಂದರೆ ಸಂತಸದ ವಿಚಾರ ಎಂದರು.
ಪಕ್ಷದ ಗ್ರಾಮಾಂತರ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್ ಮಾತನಾಡಿ, ಶಿವರಾಜ್ ತಂಗಡಗಿ ಅವರು ಜನಪ್ರಿಯ ನಾಯಕರು. ಅವರಿಗೆ ಹಿಂದುಳಿದ ವರ್ಗಗಳ ಖಾತೆ ಸಿಕ್ಕಿರುವುದು ನಿಜಕ್ಕೂ ಅರ್ಥಪೂರ್ಣ. ಈ ಮೂಲಕ ಅವರು ತಮ್ಮ ಜನಸೇವಾ ಕಾರ್ಯಕ್ರಮಗಳನ್ನು ಮುಂದುವರಿಸಲು ಅನುಕೂಲವಾಗುತ್ತದೆ ಎಂದರು.

ನಗರಾಧ್ಯಕ್ಷ ಆರ್.ಮೂರ್ತಿ, ಮಾಜಿ ಮೇಯರ್‌ಗಳಾದ ಚಿಕ್ಕಣ್ಣ, ಮೋದಾಮಣಿ, ಪುಷ್ಪಲತಾ ಚಿಕ್ಕಣ್ಣ, ಬಿ.ಕೆ.ಪ್ರಕಾಶ್, ಮುಖಂಡರಾದ ಜಿ.ವಿ.ಸೀತಾರಾಮು, ಎನ್.ಆರ್.ನಾಗೇಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net