ಸಹಕಾರ ಸಂಘಗಳ ಸಹಾಯಕ ನಿಬಂಧಕ ಅಮಾನತು

Published on

ಹುಣಸೂರು : ಕರ್ತವ್ಯಲೋಪ ಎಸಗಿದ ಸಹಕಾರ ಸಂಘಗಳ ಸಹಾಯಕ ನಿಬಂಧಕ ಆರ್ ಮಂಜುನಾಥ ಅವರನ್ನು ಸೋಮವಾರ ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಲಾಗಿದೆ.ಮೈಸೂರು ಮತ್ತು ಹುಣಸೂರು ಉಪವಿಭಾಗದಲ್ಲಿ ಈ ಹಿಂದೆ ಮಂಜುನಾಥ ಉಪನಿಬಂಧಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅವಧಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾ ನೌಕರರ ಗೃಹ ನಿರ್ಮಾಣ ಸಹಕಾರ ಸಂಘ, ಮೈಸೂರಿನ ಜೆ.ಪಿ. ನಗರ ಬ್ರಾಹ್ಮಣ ಸಂಘ, ಭೇರ್ಯ ವ್ಯವಸಾಯ ಸೇವಾ ಸಹಕಾರ ಸಂಘ ಹಾಗೂ ವಿವಿಧ ಸಂಸ್ಥೆಗಳಲ್ಲಿ ಮಾಡಿರುವ ಅವ್ಯವಹಾರಗಳ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಮೈಸೂರಿನ ಸರಸ್ವತಿಪುರಂ ನಿವಾಸಿ ಎಚ್. ತೇಜಸ್ವಿ ಎಂಬವರು ದೂರು ನೀಡಿದ್ದರು.

ವಿಚಾರಣೆ ನಡೆಸಿದ ಸಹಕಾರ ಇಲಾಖೆ ಅಧೀನ ಕಾರ್ಯದರ್ಶಿಗಳು, ಕರ್ತವ್ಯ ಲೋಪ ಎಸೆಗಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಅಮಾನತು ಆದೇಶ ಹೊರಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net