

ಮಡಿಕೇರಿ: ಸುಮಾರು ೧೨ ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಅಮರ್ ಜವಾನ್ ಸ್ಮಾರಕ ಮತ್ತು ಧ್ವಜಸ್ತಂಬದ ಉದ್ಘಾಟನಾ ಸಮಾರಂಭವನ್ನು ಅ.೨೭ರಂದು ಹುದಿಕೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಬಲ್ಯಮೀದೇರಿರ.ಎ.ಪ್ರಕಾಶ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಅಂದು ಬೆಳಗ್ಗೆ ೧೦.೩೦ ಗಂಟೆಗೆ ತನ್ನ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಮತ್ತು ಶಾಸಕರಾದ ಅಜ್ಜಿಕುಟ್ಟಿರ.ಎಸ್.ಪೊನ್ನಣ್ಣ ಉದ್ಘಾಟಿಸಲಿದ್ದು, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಉಪಸ್ಥಿತರಲಿದ್ದಾರೆ. ನಂತರ ಬೆಳಗ್ಗೆ ೧೧.೧೫ ಗಂಟೆಗೆ ನಡೆಯುವ ಸಭಾಕಾರ್ಯಕ್ರಮದಲ್ಲಿ ಅಜ್ಜಿಕುಟ್ಟಿರ.ಎಸ್.ಪೊನ್ನಣ್ಣ, ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಜಿಲ್ಲಾಧಿಕಾರಿ ವೆಂಕಟ್‌ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ತಹಶೀಲ್ದಾರ್ ಕೆ.ಎನ್.ಮೋಹನ್ ಕುಮಾರ್, ಹುದಿಕೇರಿ ಗ್ರಾ.ಪಂ ಅಧ್ಯಕ್ಷೆ ಕುಪ್ಪಣಮಾಡ ನಿವ್ಯ ಕಾವೇರಮ್ಮ, ಇತರರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಚೆಕ್ಕೆರ ರಮೇಶ್, ಕಾರ್ಯದರ್ಶಿ ಬೊಜ್ಜಂಗಡ ದೀಪು ತಿಮ್ಮಯ್ಯ, ಖಜಾಂಚಿ ಬೊಳ್ಳಜಿರ ಕಿಶೋರ್, ಸಂಘಟನಾ ಕಾರ್ಯದರ್ಶಿ ಕಿರಿಯಮಾಡ ಮಿಲನ್ ಗಣಪತಿ, ನಿದೇರ್ಶಕರಾದ ಮಲ್ಲೆಂಗಡ ಜಯ ಉತ್ತಯ್ಯ ಇದ್ದರು.