ಅಮರ ಶಿಲ್ಪಿ ಜಕಣಾಚಾರಿ ಜಯಂತಿ ಆಚರಣೆ

ನಂಜನಗೂಡಿನಲ್ಲಿವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್, ಚಂದ್ರು, ಸ್ನೇಕ್‌ಬಸವರಾಜು ಇದ್ದರು.
ನಂಜನಗೂಡಿನಲ್ಲಿವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್, ಚಂದ್ರು, ಸ್ನೇಕ್‌ಬಸವರಾಜು ಇದ್ದರು.
Published on

ನಂಜನಗೂಡು: ನಗರದ ತಾಲೂಕು ಆಡಳಿತ ಭವನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಜಯಂತಿಯನ್ನು ಸರಳವಾಗಿ ಆಚರಣೆ ಮಾಡಲಾಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ತಹಸೀಲ್ದಾರ್ ಶಿವಕುಮಾರ್ ಕಾಸ್ನೂರು, ಜಕಣಾಚಾರಿ ಅವರು ರೂಪಿಸಿದ ಅದ್ಭುತ ಕಲಾಕೃತಿಗಳು ಇಂದಿಗೂ ನಮ್ಮನ್ನು ಬೆರಗುಗೊಳಿಸುತ್ತವೆ. ಇಂತಹ ಕಲೆ ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿ ಎಂದರು.

ಬೇಲೂರು, ಹಳೆಬೀಡು ಸೇರಿದಂತೆ ಇತರ ಸ್ಥಳಗಳಲ್ಲಿ ಜಕಣಾಚಾರಿ ಅವರು ಕಲ್ಲಿನಲ್ಲಿ ಕೆತ್ತಿದ ಕಲಾಕೃತಿಗಳನ್ನು ನೋಡುವುದೇ ಒಂದು ಸೌಭಾಗ್ಯ. ಮಾಡುವ ಕೆಲಸದ ಬಗ್ಗೆ ತಿಳಿವಳಿಕೆ, ಶ್ರದ್ಧೆ, ನಿಷ್ಠೆ ಮತ್ತು ಪ್ರಾಮಾಣಿಕತೆ ಇದ್ದಲ್ಲಿ ಯಶಸು ಲಭಿಸುತ್ತದೆ. ನಮ್ಮೊಳಗಿನ ಕಲೆಯನ್ನು ನಾವು ಗುರುತಿಸಿದರೆ ಮಾತ್ರ ಸಮಾಜ ನಮ್ಮನ್ನು ಗುರುತಿಸುತ್ತದೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್, ವಿಶ್ವಕರ್ಮ ಸಮಾಜದ ಅಧ್ಯಕ್ಷ ಚಂದ್ರು, ವನ್ಯಜೀವಿ ಸಂರಕ್ಷಕ ಗೋಳೂರು ಸ್ನೇಕ್ ಬಸವರಾಜು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net