ಅಮರಗೋಳದಲ್ಲಿ ಮಹಾಪೂಜೆ ಅನ್ನಸಂತರ್ಪಣೆ

IMG-20250828-WA0001_1-1.jpg
Published on

ಹುಬ್ಬಳ್ಳಿ: ತಾಲೂಕಿನ ಅಮರಗೋಳ ಗ್ರಾಮದ ನಾರಾಯಣಪುರ ಓಣಿಯಲ್ಲಿ ಶ್ರೀ ಸಿದ್ಧೇಶ್ವರ ಯುವಕ ಮಂಡಳಿ ವತಿಯಿಂದ 13ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಭಕ್ತಿ -ಸಾಂಸ್ಕೃತಿಕ ಸಂಭ್ರಮದಿಂದ ನಡೆಯುತ್ತಿದೆ.

ಬೃಹತ್ ಮಹಾಗಣಪತಿ ಪ್ರತಿಷ್ಠಾಪಿಸಲಾಗಿದ್ದು, ಆ. 30ರಂದು ವಿಶೇಷ ಮಹಾಪೂಜೆ, ಮಧ್ಯಾಹ್ನ ಉತ್ತರ ಕರ್ನಾಟಕ ಶೈಲಿಯ ಮಹಾಪ್ರಸಾದ ಏರ್ಪಡಿಸಲಾಗಿದೆ.

ಸೆಪ್ಟೆಂಬರ್ 4ರಂದು ಮಧ್ಯಾಹ್ನ 3ಕ್ಕೆ ಅದ್ದೂರಿ ಮೆರವಣಿಗೆ ಮೂಲಕ ವಿಸರ್ಜನೆ ಮಾಡಲಾಗುವುದು. ಪ್ರಸಿದ್ಧ ಸಾಂಸ್ಕೃತಿಕ ಕಲಾ ತಂಡಗಳ ಸಹಭಾಗಿತ್ವದಲ್ಲಿ ಮೆರವಣಿಗೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net