

ಹುಬ್ಬಳ್ಳಿ: ತಾಲೂಕಿನ ಅಮರಗೋಳ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾದ ಶ್ರೀ ಕಾಳಿಕಾದೇವಿ ದೇವಸ್ಥಾನದ ಲೋಕಾರ್ಪಣೆ ಹಾಗೂ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಸಮಾರಂಭ ಆ. 19ರಂದು ಏರ್ಪಡಿಸಲಾಗಿದೆ.
ಸೋಮವಾರ ಬೆಳಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಚಂಡಿಕಾ ಹೋಮ ಮತ್ತು ಪ್ರಾಣ ಪ್ರತಿಷ್ಠಾಪನೆ ಜರುಗಲಿದೆ.
ಸುಳ್ಳದ ಪಂಚಗ್ರಹ ಹಿರೇಮಠದ ಶ್ರೀ ಶಿವ ಸಿದ್ದರಾಮ ಶಿವಯೋಗಿ ಶಿವಾಚಾರ್ಯರು, ಅಮ್ಮಿನಭಾವಿಯ ಶ್ರೀ ಅಭಿನವ ಶಾಂತಲಿಂಗ ಶಿವಾಚಾರ್ಯರು, ಅಮರಗೋಳದ ವೇದಮೂರ್ತಿ ಶ್ರೀ ಚಂದ್ರಶೇಖರ ಹಿರೇಮಠ ಅವರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.
ಸಂಜೆ 5.30ಕ್ಕೆ ಮನೋರಂಜನೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಕೆಸಿಸಿ ಬ್ಯಾಂಕ್ ಅಧ್ಯಕ್ಷ ಶಿವಕುಮಾರ ಪಾಟೀಲ ಉದ್ಘಾಟನೆ ನೆರವೇರಿಸುವರು. ಉಪಾಧ್ಯಕ್ಷ ನಿಂಗನಗೌಡ ಮರಿಗೌಡ್ರ, ಪಾಲಿಕೆ ಮಾಜಿ ಸದಸ್ಯ ಶಾಂತಪ್ಪ ದೇವಕ್ಕಿ ಅತಿಥಿಗಳಾಗಿ ಪಾಲ್ಗೊಳ್ಳುವರು. ಚಂಬಣ್ಣ ಕರಿಕಟ್ಟಿ ಅಧ್ಯಕ್ಷತೆ ವಹಿಸುವರು.