ಮಹನೀಯರ ಪುತ್ಥಳಿಗೆ ಮಾಲಾರ್ಪಣೆ

0102
Published on

ಬೆಳಗಾವಿ: ಜಿಲ್ಲಾ ಉಸ್ತುವಾರಿ ಸಚಿವರಾದ ಬಳಿಕ ಮೊದಲ ಬಾರಿಗೆ ಶುಕ್ರವಾರ ನಗರಕ್ಕೆ ಆಗಮಿಸಿದ ಜಲಸಂಪನ್ಮೂಲ ಇಲಾಖೆ ಸಚಿವ ರಮೇಶ ಜಾರಕಿಹೊಳಿ ಅವರು ಕಿತ್ತೂರು ಚನ್ನಮ್ಮ ಹಾಗೂ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಸೇರಿದಂತೆ ವಿವಿಧ ಮಹನೀಯರ ಪುತ್ಥಳಿಗಳಿಗೆ ಮಾಲಾರ್ಪಣೆ ಮಾಡಿದರು.

ಗೋಕಾಕದಿಂದ ನೇರವಾಗಿ ಕಿತ್ತೂರು ಚನ್ನಮ್ಮ ವೃತ್ತಕ್ಕೆ ಆಗಮಿಸಿದ ಸಚಿವ ರಮೇಶ ಜಾರಕಿಹೊಳಿ, ಚನ್ನಮ್ಮ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.

ಬಳಿಕ ಡಾ. ಅಂಬೇಡ್ಕರ್, ಛತ್ರಪತಿ ಶಿವಾಜಿ ಹಾಗೂ ಬಸವೇಶ್ವರ ಪುತ್ಥಳಿಗಳಿಗೆ ಮಾಲಾರ್ಪಣೆ ಮಾಡಿದರು. ನಂತರ ಪ್ರವಾಸಿಮಂದಿರಕ್ಕೆ ತೆರಳಿದ ಅವರಿಗೆ ನೂರಾರು ಬೆಂಬಲಿಗರು ಹೂಗುಚ್ಛ ನೀಡಿ ಅಭಿನಂದನೆ ಸಲ್ಲಿಸಿದರು. ಶಾಸಕ ಅನಿಲ ಬೆನಕೆ, ಜಿಲ್ಲಾಧಿಕಾರಿ ಡಾ. ಎಸ್.ಬಿ. ಬೊಮ್ಮನಹಳ್ಳಿ, ಪೊಲೀಸ್ ಆಯುಕ್ತ ಬಿ.ಎಸ್. ಲೋಕೇಶಕುಮಾರ್, ಎಸ್ಪಿ ಲಕ್ಷ್ಮಣ ನಿಂಬರಗಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net