ಕಾರ್ತಿಕ ಮಾಸದ ಅಮಾವಾಸ್ಯೆ ಪೂಜೆ

05SPT2
ಸೋಮವಾರಪೇಟೆ ಬಸವೇಶ್ವರ ದೇವಾಲಯದಲ್ಲಿ ಕಾರ್ತಿಕ ಮಾಸದ ಲಕ್ಷ ದೀಪದ ಕಾರ್ಯಕ್ರಮ ನಡೆಯಿತು.
Published on

ಸೋಮವಾರಪೇಟೆ: ವೀರಶೈವ ಸಮಾಜ, ಬಸವೇಶ್ವರ ಯುವಕ ಸಂಘದ ವತಿಯಿಂದ ಕಾರ್ತಿಕ ಮಾಸದ ಅಮಾವಾಸ್ಯೆ ಪೂಜೆ ಇತ್ತೀಚೆಗೆ ನಡೆಯಿತು. ಕಾರ್ಯಕ್ರಮದ ಪ್ರಯುಕ್ತ ಬಸವೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಮತ್ತು ಮಹಾಮಂಗಳಾರತಿ, ದಾವಣಗೆರೆ ಬಸವೇಶ್ವರ ಮಠದ ಮಠಾಧೀಶ ಶ್ರೀ ಗುರುಮೂರ್ತಿ ಮಹಾಸ್ವಾಮಿ ಸಾನ್ನಿಧ್ಯದಲ್ಲಿ ನಡೆಯಿತು. ಕಾರ್ತಿಕ ಅಮಾವಾಸ್ಯೆ ಪ್ರಯುಕ್ತ ನಂದಿ ಧ್ವಜ ಮೆರವಣಿಗೆ ನಡೆಸಲಾಯಿತು. ದೇವಾಲಯದ ಯಜಮಾನ ಬಿ.ಪಿ. ಶಿವಕುಮಾರ್, ಮೃತ್ಯುಂಜಯ, ಕಾರ್ಯದರ್ಶಿ ನಾಗರಾಜು ಹಾಗೂ ಸಮಾಜ ಬಾಂಧವರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net