ಬೆಟ್ಟಳ್ಳಿ ಮಾರಮ್ಮನಿಗೆ ಅಮಾವಾಸ್ಯೆ ಪೂಜೆ

oppo_2
ಮಣ್ಣೆತ್ತಿನ ಅಮಾವಾಸ್ಯೆಯ ಹಿನ್ನೆಲೆಯಲ್ಲಿ ಹನೂರಿನ ಶ್ರೀ ಬೆಟ್ಟಳ್ಳಿ ಮಾರಮ್ಮನ ದೇಗುಲಕ್ಕೆ ಭಕ್ತರು ಆಗಮಿಸಿ ದೇವರ ದರ್ಶನ ಪಡೆದರು.
Published on

ಹನೂರು : ಪಟ್ಟಣದ ಶ್ರೀ ಬೆಟ್ಟಳ್ಳಿ ಮಾರಮ್ಮನ ದೇಗುಲದಲ್ಲಿ ಶುಕ್ರವಾರ ಮಣ್ಣೆತ್ತಿನ ಅಮಾವಾಸ್ಯೆಯ ಅಂಗವಾಗಿ ದೇವಿಯ ಮೂರ್ತಿಯನ್ನು ವೀಳ್ಯದೆಲೆಯಿಂದ ಸಿಂಗರಿಸಿ ವಿಶೇಷ ಪೂಜೆ ನೆರವೇರಿಸಲಾಯಿತು.
ಅಮಾವಾಸ್ಯೆ ಹಿನ್ನೆಲೆಯಲ್ಲಿ ದೇಗುಲವನ್ನು ತಳಿರು, ತೋರಣ ಹಾಗೂ ವಿವಿಧ ಪುಷ್ಪಗಳಿಂದ ಸಿಂಗಾರ ಮಾಡಲಾಗಿತ್ತು. ದೇವಿಗೆ ಬೆಳಗಿನ ಜಾವ 4.30ರಲ್ಲಿ ಪನ್ನೀರು, ಎಳನೀರು, ಜೇನುತುಪ್ಪ, ಹಾಲು, ಮೊಸರು, ಅರಿಶಿಣ, ಕುಂಕುಮ ಹಾಗೂ ಗಂಧದ ಅಭಿಷೇಕ ನೆರವೇರಿಸಲಾಯಿತು. ಬಳಿಕ ವಿಗ್ರಹ ಮೂರ್ತಿಯನ್ನು ವೀಳ್ಯದೆಲೆ ಹಾಗೂ ಪುಷ್ಪಗಳಿಂದ ಸಿಂಗರಿಸಿ ವಿಶೇಷ ಪೂಜೆ ನೆರವೇರಿಸಲಾಯಿತು. ಈ ವೇಳೆ ದೇವಿಗೆ ಪಂಚಾಮೃತ ಅಭಿಷೇಕ ಅರ್ಪಿಸಿ ಧೂಪದಾರತಿ, ಕೊಬ್ಬರಿ, ಬೆಲ್ಲ, ನಿಂಬೆಹಣ್ಣಿನ ಆರತಿ ಹಾಗೂ ಮಹಾ ಮಂಗಳಾರತಿ ಬೆಳಗಿಸಲಾಯಿತು. ಬಳಿಕ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಯಿತು.
ಪಟ್ಟಣ ಸೇರಿದಂತೆ ಆರ್.ಎಸ್ ದೊಡ್ಡಿ ಭೈರನತ್ತ, ಉದ್ದನೂರು, ಬೆಳತ್ತೂರು, ಮಾಲಾಪುರ, ಅಜ್ಜೀಪುರ, ಚಿಂಚಳ್ಳಿ, ಮಣಗಳ್ಳಿ, ಮಂಗಲ ಹಾಗೂ ಈ ಭಾಗದ ಇನ್ನಿತರ ಕಡೆಗಳಿಂದ ಆಗಮಿಸಿದ ಭಕ್ತರು ದೇವರ ದರ್ಶನ ಪಡೆದರು. ಹರಕೆ ಹೊತ್ತ ಭಕ್ತರು ದೇಗುಲದ ಮುಂಭಾಗದಲ್ಲಿ ಉಪ್ಪು ಸುರಿದು ದೇವಿ ಕೃಪೆಗೆ ಪಾತ್ರರಾದರು. ಅರ್ಚಕ ಜಯಂತ್‌ರಾವ್ ಸಿಂಧೆ, ಪೂಜಾ ಕೈಂಕರ್ಯ ನೆರವೇರಿಸಿದರು.
ದಿಂಬಾದಳೇಶ್ವರ ದೇಗುಲದಲ್ಲೂ ಪೂಜೆ: ಆರ್.ಎಸ್ ದೊಡ್ಡಿ ಬಳಿಯ ದಿಂಬಾದಳೇಶ್ವರ ಸ್ವಾಮಿ ದೇಗುಲದಲ್ಲಿ ಶುಕ್ರವಾರ ಜೇಷ್ಠಮಾಸದ ಅಮಾವಾಸ್ಯೆ ಹಿನ್ನೆಲೆಯಲ್ಲಿ ಮಂಗಲ ಗ್ರಾಮಸ್ಥರಿಂದ ವಿಶೇಷ ಪೂಜೆ ನೆರವೇರಿಸಲಾಯಿತು. ದೇಗುಲವನ್ನು ತಳೀರು ತೋರಣ ಹಾಗೂ ವಿವಿಧ ಪುಷ್ಪಗಳಿಂದ ಸಿಂಗಾರ ಮಾಡಲಾಗಿತ್ತು. ಬೆಳಗ್ಗೆ ದೇಗುಲದ ಲಿಂಗಮೂರ್ತಿಗೆ ವಿವಿಧ ಅಭಿಷೇಕ ನೆರವೇರಿಸಿ ಮಧ್ಯಾಹ್ನ 12ರಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಆಗಮಿಸಿದ ಭಕ್ತರು ದೇವರ ದರ್ಶನ ಪಡೆದರು. ಭಕ್ತರಿಗೆ ಪ್ರಸಾದ ವಿನಿಯೋಗಿಸಲಾಯಿತು.

ಫೋಟೋ
05 ಹನೂರು 2
ಮಣ್ಣೆತ್ತಿನ ಅಮಾವಾಸ್ಯೆಯ ಹಿನ್ನೆಲೆಯಲ್ಲಿ ಹನೂರಿನ ಶ್ರೀ ಬೆಟ್ಟಳ್ಳಿ ಮಾರಮ್ಮನ ದೇಗುಲಕ್ಕೆ ಭಕ್ತರು ಆಗಮಿಸಿ ದೇವರ ದರ್ಶನ ಪಡೆದರು.
05 ಹನೂರು 2 ಎ
ಶ್ರೀ ಬೆಟ್ಟಳ್ಳಿ ಮಾರಮ್ಮ ದೇವಿಯ ಮೂರ್ತಿಯನ್ನು ವಿಳ್ಯದೆಲೆಯಿಂದ ಸಿಂಗರಿಸಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net