ಅಮಾವಾಸ್ಯೆ ವಿಶೇಷ ಪೂಜೆ

14 yelandur 03
Published on


ಚಾಮರಾಜನಗರ : ಯಳಂದೂರು ತಾಲೂಕಿನ ಕಂದಹಳ್ಳಿ ಗ್ರಾಮದಲ್ಲಿರುವ ಮಹದೇಶ್ವರಸ್ವಾಮಿ ದೇಗುಲಕ್ಕೆ ಗುರುವಾರ ಅಮಾವಾಸ್ಯೆ ನಿಮಿತ್ತ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡಿ ಪೂಜೆ ಸಲ್ಲಿಸಿದರು.


ಅಮಾವಾಸ್ಯೆ ನಿಮಿತ್ತ ದೇಗುಲವನ್ನು ವಿಶೇಷ ರೀತಿಯಲ್ಲಿ ಅಲಂಕರಿಸಿ ಬೆಳಗ್ಗೆಯಿಂದಲೇ ಅಭಿಷೇಕ, ಸಹಸ್ರ ಬಿಲ್ವಾರ್ಚನೆ ಸೇರಿದಂತೆ ವಿವಿಧ ಪೂಜಾ ಕೈಂಕರ್ಯ ನೆರವೇರಿಸಲಾಯಿತು. ಹರಕೆ ಹೊತ್ತ ಭಕ್ತರು ದಂಡಗೋಲು ಸೇವೆ, ರಥೋತ್ಸವ ಸೇರಿದಂತೆ ವಿವಿಧ ಸೇವೆ ಸಲ್ಲಿಸಿದರು. ದೇಗುಲ ವತಿಯಿಂದ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net