ಸ್ಮಾರ್ಟ್‌ಸಿಟಿ ಯೋಜನೆಯಡಿ ಅದ್ಭುತ ನಿರ್ಮಾಣ

h7-Chitaguppi Hospital 1
Published on

ಹುಬ್ಬಳ್ಳಿ: ಸ್ಮಾರ್ಟ್‌ಸಿಟಿ ಯೋಜನೆಯಡಿ ನಿರ್ಮಾಣವಾದ ಉನ್ನತದಜೆರ್ಯ ಮಹಾನಗರ ಪಲಿಕೆಯ ಚಿಟಗುಪ್ಪಿ ಆಸ್ಪತ್ರೆಯಲ್ಲಿ ಎನ್‌ಐಸಿಯು ಘಟಕ, ಫಿಜಿಯೋಥೆರಪಿ, ಪುನರ್ವಸತಿ ಕೇಂದ್ರ ಆರಂಭವಾಗಿರುವುದು ಸಂತಸ ತಂದಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
ನಗರದ ಚಿಟಗುಪ್ಪಿ ಆಸ್ಪತ್ರೆಯಲ್ಲಿ ಇನ್ನರ್‌ವೀಲ್ ಕ್ಲಬ್ ಹುಬ್ಬಳ್ಳಿ ಮಿಡ್‌ಟೌನ್, ರಾಮದೇವಿ ತ್ಯಾಗಿ ಚಾರಿಟಬಲ್ ಸೊಸೈಟಿ ಪ್ರಾಯೋಜಿತ ಎನ್‌ಐಸಿಯು ಘಟಕ ಹಾಗೂ ಮಜೇಥಿಯಾ ಫೌಂಡೇಷನ್ ವತಿಯಿಂದ ಅಳವಡಿಸಿರುವ ಫಿಜಿಯೋಥೆರಪಿ ಹಾಗೂ ಪುನರ್ವಸತಿ ಕೇಂದ್ರವನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಧಾನಿ ನರೇಂದ್ರ ಮೋದಿ ಅವರ ಬಹುದೊಡ್ಡ ಯೋಜನೆ ಸ್ಮಾರ್ಟ್‌ಸಿಟಿ. ಚಿಟಗುಪ್ಪಿ ಆಸ್ಪತ್ರೆಯನ್ನು ಇದೇ ಯೋಜನೆಯಡಿ ಅಭಿವೃದ್ಧಿಪಡಿಸಲಾಗಿದೆ. ಒಳ್ಳೆಯ ಸ್ಥಳಾವಕಾಶವಿದೆ ಎಂದರು.
ಸಾರ್ವಜನಿಕರಿಗಾಗಿ ಇನ್ನರ್‌ವೀಲ್ ಕ್ಲಬ್ ಹುಬ್ಬಳ್ಳಿ ಮಿಡ್‌ಟೌನ್ ಹಾಗೂ ಮಜೇಥಿಯಾ ಫೌಂಡೇಷನ್ ವತಿಯಿಂದ ನೂತನ ಘಟಕ ಆರಂಭಿಸಲಾಗಿದೆ. ಇವರಿಗೆ ಧನ್ಯವಾದ ಎಂದರು.
ಶಾಸಕರಾದ ಪ್ರಸಾದ ಅಬ್ಬಯ್ಯ, ಮಹೇಶ ಟೆಂಗಿನಕಾಯಿ, ಮಹಾಪೌರ ರಾಮಣ್ಣ ಬಡಿಗೇರ, ಉಪ ಮಹಾಪೌರ ದುರ್ಗಮ್ಮ ಬಿಜವಾಡ, ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ, ಮುಖ್ಯ ವೈದ್ಯಾಧಿಕಾರಿ ಡಾ. ಶ್ರೀಧರ ದಂಡಪ್ಪನವರ, ಕ್ಲಬ್ ಅಧ್ಯಕ್ಷೆ ಶಿಲ್ಪಾ ಶೆಟ್ಟಿ, ಗೋಲ್ಡ್ ಪ್ಲಸ್ ಗ್ಲಾಸ್ ಇಂಡಸ್ಟ್ರೀಸ್‌ನ ಡಾ. ನೇಹಾ ತ್ಯಾಗಿ, ಪಾಲಿಕೆ ಪ್ರತಿಪಕ್ಷ ನಾಯಕಿ ಸುವರ್ಣಾ ಕಲಕುಂಟ್ಲಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net