ಅಂಬಡಬೆಟ್ಟು ಸೇತುವೆ ಶಿಥಿಲ : ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

bridge
ಉಜಿರೆ-ಇಂದಬೆಟ್ಟು ಜಿಲ್ಲಾ ಮುಖ್ಯ ರಸ್ತೆಯ 1 ಕಿ.ಮೀ. ದೂರದಲ್ಲಿ ಶಿಥಿಲಾವಸ್ಥೆಯಲ್ಲಿರುವ ಅಂಬಡಬೆಟ್ಟು ಸೇತುವೆ.
Published on

ಬೆಳ್ತಂಗಡಿ: ತಾಲೂಕಿನ ಕಲ್ಮಂಜ ಗ್ರಾಮ ನಿಡಿಗಲ್ ಮೂಲಕ ನಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುರಿಪಳ್ಳಕ್ಕೆ ಸಂಪರ್ಕ ಕಲ್ಪಿಸುವ ಉಜಿರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉಜಿರೆ-ಇಂದಬೆಟ್ಟು ಜಿಲ್ಲಾ ಮುಖ್ಯ ರಸ್ತೆಯ 1 ಕಿ.ಮೀ. ದೂರದಲ್ಲಿರುವ ಅಂಬಡಬೆಟ್ಟು ಸೇತುವೆ ಶಿಥಿಲಾವಸ್ಥೆಯಲ್ಲಿ ಇರುವುದರಿಂದ ವಾಹನ ಸಂಚಾರಕ್ಕೆ ಅಪಾಯಕಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಆದೇಶದ ವರೆಗೆ ಈ ಸೇತುವೆಯಲ್ಲಿ ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಿ ಸಂಚಾರ ಮಾರ್ಗ ಬದಲಾಯಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲ್ಲೈಮುಗಿಲನ್ ಆದೇಶಿಸಿದ್ದಾರೆ.

ಉಜಿರೆ-ಇಂದಬೆಟ್ಟು ಜಿಲ್ಲಾ ಮುಖ್ಯ ರಸ್ತೆಯಲ್ಲಿ ಸಂಚರಿಸುವ ವಾಹನಗಳು ಬದಲಿ ರಸ್ತೆಯನ್ನು ಬಳಸಿಕೊಂಡು ಸಂಚರಿಸಬಹುದಾಗಿದೆ. ಉಜಿರೆ ಜನಾರ್ದನ ಸ್ವಾಮಿ ದೇವಸ್ಥಾನದ ದ್ವಾರದಿಂದ ಸುರ್ಯ ದೇವಸ್ಥಾನ ಮಾರ್ಗವಾಗಿ, ಕೇಳ್ತಾಜೆ ಮುಖಾಂತರ ಸಂಚರಿಸಬೇಕು. ಬೆಳ್ತಂಗಡಿ-ಕಿಲ್ಲೂರು-ಕಾಜೂರು ರಸ್ತೆಯ ಇಂದಬೆಟ್ಟು ಗ್ರಾಮದಿಂದ ನೇತ್ರಾವತಿ ಎಸ್.ಟಿ. ಕಾಲನಿ ಮಾರ್ಗವಾಗಿ ಬೆಳ್ಳೂರು ಕ್ರಾಸ್ ರಸ್ತೆಯಾಗಿ, ರಾಜ್ಯ ಹೆದ್ದಾರಿ-276 ರಸ್ತೆಯಾದ ಧರ್ಮಸ್ಥಳ, ಮುಂಡಾಜೆ, ದಿಡುಪೆ ರಸ್ತೆಯನ್ನು ಸಂಪರ್ಕಿಸುವಂತೆ ಆದೇಶಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net