ಸಂಜೀವಿನಿ ಸ್ವಸಹಾಯ ಸಂಘಗಳ ಸದಸ್ಯರಿಂದ ಮನ್ ಕೀ ಬಾತ್ ವೀಕ್ಷಣೆ

udp-28-ambalpay
Published on

ಉಡುಪಿ: ದೇಶದ 12 ಅಧಿಕೃತ ವೀಕ್ಷಣಾ ಕೇಂದ್ರಗಳಲ್ಲಿ ಒಂದಾದ ಜಿಲ್ಲೆಯ ಅಂಬಲಪಾಡಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ದೂರದರ್ಶನದ ಸಹಯೋಗದೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯ ’ಮನ್ ಕೀ ಬಾತ್’ ಕಾರ್ಯಕ್ರಮ ನೇರ ಪ್ರಸಾರವನ್ನು ಸಂಜೀವಿನಿ ಒಕ್ಕೂಟದ ಸ್ವಸಹಾಯ ಸಂಘಗಳ ಮಹಿಳಾ ಸದಸ್ಯರು ಭಾನುವಾರ ವೀಕ್ಷಿಸಿದರು.

ಅಂಬಲಪಾಡಿ, ಕಡೆಕಾರು, ಉದ್ಯಾವರ ತೆಂಕನಿಡಿಯೂರು, ಬಡಾನಿಡಿಯೂರು, ಕಲ್ಯಾಣಪುರ, ಕೆಮ್ಮಣ್ಣು, ಪೆರ್ಡೂರು ಮತ್ತಿತರ ಗ್ರಾ.ಪಂ. ವ್ಯಾಪ್ತಿಯ ಸಂಜೀವಿನಿ ಒಕ್ಕೂಟದ ಸ್ವಸಹಾಯ ಸಂಘಗಳ 100ಕ್ಕೂ ಅಧಿಕ ಮಹಿಳಾ ಸದಸ್ಯರು ಮನ್ ಕೀ ಬಾತ್ ವೀಕ್ಷಣೆಯಲ್ಲಿ ಭಾಗವಹಿಸಿದ್ದರು. ಪ್ರಧಾನಿ ಮಾತನಾಡುತ್ತಿದ್ದಾಗ ಅಂಬಲಪಾಡಿ ಸಭಾಂಗಣದ ದೃಶ್ಯಾವಳಿಗಳನ್ನು 2 ಬಾರಿ ನೇರಪ್ರಸಾರ ಮಾಡಲಾಯಿತು. ಈ ಸಂದರ್ಭದಲ್ಲಿ ತೆರೆಯಲಾದ ಸಂಜೀವಿನಿ ವಿಶೇಷ ಸಂತೆಯಲ್ಲಿ ಸ್ವ-ಸಹಾಯ ಸಂಘಗಳ ಸದಸ್ಯರಿಂದ ಉತ್ಪಾದಿಸಲ್ಪಟ್ಟ ವಿವಿಧ ಸಾಮಗ್ರಿಗಳ ಮಾರಾಟ ಪ್ರಕ್ರಿಯೆ ನಡೆಯಿತು.

ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿ. ಅಧ್ಯಕ್ಷ ಕೆ.ಉದಯ ಕುಮಾರ್ ಶೆಟ್ಟಿ, ಅಂಬಲಪಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೋಹಿಣಿ ಎಸ್. ಪೂಜಾರಿ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಎಚ್., ಸಹಾಯಕ ಯೋಜನಾಧಿಕಾರಿ ಜೇಮ್ಸ್ ಡಿ’ಸಿಲ್ವಾ, ಮನ್ ಕೀ ಬಾತ್ ವೀಕ್ಷಣೆ ಕಾರ್ಯಕ್ರಮದ ಸಂಯೋಜಕ ಶಿವಕುಮಾರ್ ಅಂಬಲಪಾಡಿ, ಗ್ರಾಪಂ ಪಿ.ಡಿ.ಒ. ವಸಂತಿ, ಎನ್.ಆರ್.ಎಲ್.ಎಂ. ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಪ್ರಭಾಕರ ಆಚಾರ್, ಜಿಲ್ಲಾ ವ್ಯವಸ್ಥಾಪಕಿ ನವ್ಯಾ, ತಾಲೂಕು ವ್ಯವಸ್ಥಾಪಕ ಕೃಷ್ಣ, ತಾ.ಪಂ. ಮಾಜಿ ಉಪಾಧ್ಯಕ್ಷ ರಾಜೇಂದ್ರ ಪಂದುಬೆಟ್ಟು, ದೂರದರ್ಶನದ ಮುಖ್ಯ ಪ್ರತಿನಿಧಿ ಆಯೇಷಾ ಖಾನ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net