ಅಶೋಕಪುರದಲ್ಲಿ ಅಂಬೇಡ್ಕರ್ ಜಯಂತಿ

14mdk01
Published on

ಮಡಿಕೇರಿ:

ಇಲ್ಲಿಯ ಆಶೋಕಪುರದ ಅನ್ನಪೂರ್ಣೇಶ್ವರಿ ದೇವಾಲಯ ಸಮಿತಿ ವತಿಯಿಂದ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿಯನ್ನು ಶುಕ್ರವಾರ ಆಚರಿಸಲಾಯಿತು.
ದೇವಾಲಯ ಆವರಣದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಲಾಯಿತು. ಪ್ರಮುಖರಾದ ಹೆಚ್. ಆರ್. ಮುತ್ತಪ್ಪ ಮಾತನಾಡಿ, ತಾರತಮ್ಯದ ನಡುವೆ ಶಿಕ್ಷಣವನ್ನು ಅಸ್ತ್ರವನ್ನಾಗಿ ಮಾಡಿಕೊಂಡು ಅಂಬೇಡ್ಕರ್ ಶೋಷಿತರ ದನಿಯಾಗಿ ಕೆಲಸ ಮಾಡಿದರು. ಪ್ರಜಾಪ್ರಭುತ್ವದ ಬುನಾದಿಯಾದ ಸಂವಿಧಾನ ರಚಿಸುವ ಮೂಲಕ ಸಮಸಮಾಜ ನಿರ್ಮಾಣದಲ್ಲಿ ಅಂಬೇಡ್ಕರ್ ಪಾತ್ರ ಮಹತ್ತರವಾಗಿದೆ. ಅವರ ತತ್ವ, ಆದರ್ಶ ಪ್ರತಿಯೊಬ್ಬರು ಮೈಗೂಡಿಸಿಕೊಳ್ಳಬೇಕೆಂದರು.

ಕಾರ್ಯಕ್ರಮದಲ್ಲಿ ದೇವಾಲಯ ಸಮಿತಿ ಅಧ್ಯಕ್ಷ ಎಂ. ಜಯರಾಮ್, ಪ್ರಧಾನ ಕಾರ್ಯದರ್ಶಿ ಹೆಚ್.ಟಿ. ವೆಂಕಪ್ಪ, ಉಪಾಧ್ಯಕ್ಷ ಎಂ.ಡಿ. ಧಮೇರ್ಂದ್ರ, ಸಹಕಾರ್ಯದರ್ಶಿ ಎಂ.ಪಿ. ಜಯಪ್ರಕಾಶ್, ಪ್ರಮುಖರಾದ ಹೆಚ್.ಟಿ. ಶಾಮ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net