ಅಂಬೇಡ್ಕರ್ ಭವನ ಶೀಘ್ರ ಪೂರ್ಣ

19ark-2
ಅರಕಲಗೂಡಿನಲ್ಲಿ ಅಪೂರ್ಣಗೊಂಡಿರುವ ಅಂಬೇಡ್ಕರ್ ಭವನದ ಕಾಮಗಾರಿಯನ್ನು ಕಾಂಗ್ರೆಸ್ ಮುಖಂಡ ಎಚ್.ಪಿ.ಶ್ರೀಧರ್‌ಗೌಡ ಪರಿಶೀಲನೆ ನಡೆಸಿದರು. ರಾಜೇಶ್, ಗಣೇಶ್, ಪುಟ್ಟರಾಜು, ಲಿಂಗರಾಜು ಇತರರಿದ್ದರು
Published on

ಅರಕಲಗೂಡು: ಪಟ್ಟಣದಲ್ಲಿ ನನೆಗುದಿಗೆ ಬಿದ್ದಿರುವ ಅಂಬೇಡ್ಕರ್ ಭವನ ಕಾಮಗಾರಿ ಪೂರ್ಣಗೊಳಿಸುವ ಸಂಬಂಧ ಸರ್ಕಾರದ ಗಮನಕ್ಕೆ ತರುವುದಾಗಿ ಕಾಂಗ್ರೆಸ್ ಮುಖಂಡ ಎಚ್.ಪಿ.ಶ್ರೀಧರ್‌ಗೌಡ ಭರವಸೆ ನೀಡಿದರು.

ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ದಲಿತ ಸಮುದಾಯದ ಮುಖಂಡರು ಶ್ರೀಧರ್‌ಗೌಡ ಅವರನ್ನು ಇತ್ತೀಚೆಗೆ ಭೇಟಿ ಮಾಡಿ, ಭವನದ ಕಾಮಗಾರಿ ನನೆಗುದಿಗೆ ಬಿದ್ದಿರುವ ಕುರಿತು ಮಾಹಿತಿ ನೀಡಿದರು. ನಂತರ ಸ್ಥಳಕ್ಕೆ ಭೇಟಿ ನೀಡಿದ ಪರಿಶೀಲಿಸಿ ಮಾತನಾಡಿದ ಶ್ರೀಧರ್‌ಗೌಡ, ಅಂಬೇಡ್ಕರ್ ಭವನದ ಕಾಮಗಾರಿ ಮುಗಿಯದೆ ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದೆ. ಇದರಿಂದ ಸಮುದಾಯದ ಬಡವರು ಮದುವೆ ಮತ್ತಿತರ ಶುಭ ಕಾರ್ಯಗಳನ್ನು ನಡೆಸಲು ತೊಂದರೆ ಅನುಭವಿಸುವಂತಾಗಿದೆ. ಭವನದ ಕಾಮಗಾರಿ ಅಧಕ್ಕೆ ನಿಂತಿದ್ದರಿಂದ ಶುಭ ಕಾರ್ಯಗಳಿಗಾಗಿ ದುಬಾರಿ ಹಣ ತೆರುವ ಸ್ಥಿತಿ ನಿರ್ಮಾಣವಾಗಿದೆ. ಈ ಕುರಿತು ಸಮುದಾಯ ಮುಖಂಡರು ನನ್ನ ಗಮನಕ್ಕೆ ತಂದಿದ್ದಾರೆ. ಭವನದ ಕಾಮಗಾರಿ ಪೂರ್ಣಗೊಳಿಸುವ ಸಂಬಂಧ ಸರ್ಕಾರದ ಗಮನಕ್ಕೆ ತಂದು ಅಗತ್ಯ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುವುದಾಗಿ ತಿಳಿಸಿದರು.

ಮುಖಂಡರಾದ ಬಿ.ಸಿ.ರಾಜೇಶ್, ಗಣೇಶ್ ವೇಲಾಪುರಿ, ರವಿ, ಶಂಕರ್, ಲಕ್ಷ್ಮಣ್, ನಾಗರಾಜು, ಚಂದ್ರಣ್ಣ, ಕೃಷ್ಣ ಕುಮಾರ್, ಪುಟ್ಟರಾಜು, ಲಿಂಗರಾಜು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net