ಅಂಬೇಡ್ಕರ್ ದೇಶ ಸೇವೆ ಸ್ಮರಣೆ

AMBEDKAR
Published on

ಹುಬ್ಬಳ್ಳಿ: ಬಡವರು, ದೀನ-ದಲಿತರು, ಮಹಿಳೆಯರಿಗಾಗಿ ಸಂವಿಧಾನದಲ್ಲಿ ವಿಶೇಷ ಸೌಲಭ್ಯ ಕಲ್ಪಿಸಿರುವ ಸಂವಿಧಾನಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ದೇಶ ಸೇವೆ ಸ್ಮರಣೀಯ ಎಂದು ಇತಿಹಾಸ ವಿಭಾಗದ ಮುಖ್ಯಸ್ಥ ಡಾ. ಬಸವರಾಜ ಜಿಗಳಿ ಅಭಿಪ್ರಾಯಪಟ್ಟರು.
ಇಲ್ಲಿಯ ಶ್ರೀ ಕಾಡಸಿದ್ಧೇಶ್ವರ ಕಲಾ ಮಹಾವಿದ್ಯಾಲಯ ಮತ್ತು ಎಚ್.ಎಸ್.ಕೆ. ವಿಜ್ಞಾನ ಸಂಸ್ಥೆಯಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಡಾ.ಬಿ.ಆರ್. ಅಂಬೇಡ್ಕರ್ ಜನ್ಮ ದಿನೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ದೇಶದ ಸಂವಿಧಾನವನ್ನು ನಾವೆಲ್ಲ ಕಾಪಾಡಿಕೊಂಡು ಹೋಗಬೇಕಾಗಿದೆ ಎಂದರು.
ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಸುನೀತಾ ಪಾಟೀಲ ಮಾತನಾಡಿ, ಸಂವಿಧಾನದಲ್ಲಿ ತಿಳಿಸಿರುವಂತೆ ಭಾರತೀಯರೆಲ್ಲರೂ ತಮ್ಮ ಹಕ್ಕು-ಕರ್ತವ್ಯ ಅರಿತುಕೊಳ್ಳಬೇಕು ಎಂದರು.
ಪ್ರಾಂಶುಪಾಲ ಡಾ.ವೈ.ಎನ್. ನಾಗೇಶ ಅಧ್ಯಕ್ಷತೆ ವಹಿಸಿದ್ದರು.
ವಿದ್ಯಾರ್ಥಿನಿ ಚೈತ್ರಾ ಪ್ರಾರ್ಥಿಸಿದರು. ಕಾಲೇಜು ಒಕ್ಕೂಟದ ಅಧ್ಯಕ್ಷೆ ಮತ್ತು ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ವಿಜಯಶ್ರೀ ಹಿರೇಮಠ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಐಶ್ವರ್ಯ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net