ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ಉದ್ಯೋಗಿ ಆತ್ಮಹತ್ಯೆ

suicide
Published on

ಕಾರವಾರ: ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ಒಳಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಉದ್ಯೋಗಿಯೊಬ್ಬಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ನಡೆದಿದೆ.
ಬಿಣಗಾ ಮಾಳಸಾವಾಡದ ನಳಿನಿ ಮುರಾರಿ ನಾಯ್ಕ (52) ಮೃತರು. ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ಕೆಲಸದ ಒತ್ತಡ ಎಂದು ಹೇಳುತ್ತಿದ್ದ ಆಕೆ 2023 ರಿಂದ ಕೆಲಸಕ್ಕೆ ಹೋಗುತ್ತಿರಲಿಲ್ಲ. ಇತ್ತೀಚೆಗೆ ಮೂರು ದಿನಗಳಿಂದ ಆಕೆ ಕೆಲಸಕ್ಕೆ ಮತ್ತೆ ಹೋಗುತ್ತಿದ್ದವಳು ಆಗಾಗ ಆತ್ಮಹತ್ಯೆ ಮಾಡಿಕೊಳ್ಳುವ ಮಾತನಾಡುತ್ತಿದ್ದಳು. ಅ.15 ರ ರಾತ್ರಿ ಬಾವಿಗೆ ಹಾರಿದ್ದು, ಆಕೆಯನ್ನು ಮೇಲೆತ್ತಿ ಆಸ್ಪತ್ರೆಗೆ ಸೇರಿಸಿದರೂ ಪ್ರಯೋಜನವಾಗಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net