ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ

oplus_0
ಸೋಮವಾರಪೇಟೆ ತಾಲೂಕು ಆಡಳಿತದ ವತಿಯಿಂದ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು. ಶ್ರೀಧರ್, ಪರಮೇಶ ಕುಮಾರ್, ಸತೀಶ್, ಸಿದ್ದೇಗೌಡ ಇದ್ದರು.
Published on

ಸೋಮವಾರಪೇಟೆ : ತಾಲೂಕು ಆಡಳಿತದ ವತಿಯಿಂದ ಡಾ.ಬಿ.ಆರ್ ಅಂಬೇಡ್ಕರ್ ಅವರ 68ನೇ ಮಹಾ ಪರಿನಿಬ್ಬಾಣ ದಿನವನ್ನು ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಶುಕ್ರವಾರ ಆಚರಿಸಲಾಯಿತು.

ಬಾಣವಾರ ರಸ್ತೆಯಲ್ಲಿರುವ ಅಂಬೇಡ್ಕರ್ ಪುತ್ಥಳಿಗೆ ತಹಸೀಲ್ದಾರ್ ಶ್ರೀಧರ್ ಕಂಕನವಾಡಿ ಮಾಲಾರ್ಪಣೆ ಮಾಡಿ ಮಾತನಾಡಿದರು.

ಡಿ.6ರಂದು ಅಂಬೇಡ್ಕರ್ ದೇಹತ್ಯಾಗ ಮಾಡಿದ ದಿನವನ್ನು ಪರಿನಿರ್ವಾಣ ದಿನವನ್ನಾಗಿ ಆಚರಿಸಲಾಗುತ್ತಿದೆ. ಅಂಬೇಡ್ಕರ್ ಅವರು ಸಂವಿಧಾನ ಶಿಲ್ಪಿ ಮಾತ್ರವಲ್ಲದೆ, ಮಹಾನ್ ಮಾನವತವಾದಿ. ಸಂವಿಧಾನದ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗುವಂತೆ ಮಾಡಿದರು. ಅವರ ಹೋರಾಟದ ಫಲವಾಗಿ ದೇಶದ ಜನರು ನೆಮ್ಮದಿಯಿಂದ ಬದುಕುವಂತಾಗಿದೆ ಅವರು ಆದರ್ಶ ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು.

ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪರಮೇಶ ಕುಮಾರ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಕಾರ್ಯನಿರ್ವಾಹಣ ಸತೀಶ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸಿದ್ದೇಗೌಡ, ಆರೋಗ್ಯ ನಿರೀಕ್ಷಕ ಜಾಸಿಂಖಾನ್, ದಲಿತಪರ ಸಂಘಟನೆಗಳ ಮುಖಂಡರಾದ ಜನಾರ್ಧನ್, ಟಿ.ಈ.ಸುರೇಶ್, ಬಿ.ಈ.ಜಯೇಂದ್ರ, ಪ್ರತಾಪ್. ಈರಪ್ಪ, ಡಿ.ಎಸ್.ನಿರ್ವಾಣಪ್ಪ, ಪಟ್ಟಣ ಪಂಚಾಯಿತಿ ಸದಸ್ಯರಾದ ಪಿ.ಕೆ.ಚಂದ್ರು, ಮೋಹಿನಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net