

ಕೆ.ಆರ್.ನಗರ: ದೇಶದ ಸರ್ವ ಜನಾಂಗದವರು ನೆಮ್ಮದಿಯ ಬದುಕು ಸಾಗಿಸಲು ಅನುಕೂಲವಾಗುವಂತೆ ಉತ್ತಮ ವಾತಾವರಣ ಕಲ್ಪಿಸುವ ಶ್ರೇಷ್ಟ ಸಂವಿಧಾನವನ್ನು ನೀಡಿದ ಡಾ.ಬಿ.ಆರ್.ಅಂಬೇಡ್ಕರ್ ಅವರು ಎಂದೆಂದಿಗೂ ಅಜರಾಮರ ಎಂದು ಶಾಸಕ ಡಿ.ರವಿಶಂಕರ್ ಹೇಳಿದರು.
ಪಟ್ಟಣದ ಹಾಸನ-ಮೈಸೂರು ರಸ್ತೆಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಆವರಣದಲ್ಲಿ ತಾಲೂಕು ಆಡಳಿತದ ವತಿಯಿಂದ ನಡೆದ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜಯಂತಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ಜಗತ್ತಿನ ಹಲವು ದೇಶಗಳ ಸಂವಿಧಾನವನ್ನು ಅಧ್ಯಯನ ಮಾಡಿ, ತಜ್ಞರೊಂದಿಗೆ ಸಮಾಲೋಚಿಸಿ ಅವರು ರಚಿಸಿದ ಸಂವಿಧಾನ ಜಗತ್ತಿಗೆ ಮಾದರಿ ಎಂದರು.
ಪಟ್ಟಣದ ಹೊರವಲಯದಲ್ಲಿ ನಿರ್ಮಾಣ ಹಂತದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನಕ್ಕೆ ಈಗಾಗಲೇ 2 ಕೋಟಿ ಹಣ ಮಂಜೂರಾಗಿದ್ದು, ಮುಂದುವರೆದ ಕಾಮಗಾರಿಗೆ ಮತ್ತೆ 5 ಕೋಟಿ ರೂ. ಕೊಡಿಸುವಂತೆ ಸಮಾಜ ಕಲ್ಯಾಣ ಇಲಾಖೆ ಸಚಿವರಿಗೆ ಮನವಿ ಸಲ್ಲಿಸಿದ್ದು, ಶೀಘ್ರದಲ್ಲಿಯೇ ಅನುದಾನ ಕೊಡಿಸುವ ಭರವಸೆ ಇದೆ ಎಂದರು.
ಕಾರ್ಯಕ್ರಮ ಆರಂಭಕ್ಕೂ ಮೊದಲು ಶಾಸಕ ಡಿ.ರವಿಶಂಕರ್, ತಹಸೀಲ್ದಾರ್ ಜಿ.ಸುರೇಂದ್ರಮೂರ್ತಿ, ಸಮಾಜ ಕಲ್ಯಾಣ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಎಚ್.ಎಲ್.ಶಂಕರಮೂರ್ತಿ ಮತ್ತು ಇತರ ಮುಖಂಡರು ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿ ಗೌರವ ಸಮರ್ಪಣೆ ಮಾಡಿದರು.
ಗೊರಗುಂಡಿಸುರೇಶ್ ಮತ್ತು ಸ್ನೇಹಿತರು ಭೀಮ ಗೀತೆಗಳನ್ನು ಹಾಡಿ ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಿದರು. ಈ ಸಂದರ್ಭ ಹಾಜರಿದ್ದ ಎಲ್ಲರಿಗೂ ಸಿಹಿ ವಿತರಣೆ ಮಾಡಿ ಅಂಬೇಡ್ಕರ್ ಅವರಿಗೆ ಜಯಘೋಷ ಮೊಳಗಿಸಲಾಯಿತು.
ಪುರಸಭೆ ಅಧ್ಯಕ್ಷ ಡಿ.ಶಿವಕುಮಾರ್, ಜಿ.ಪಂ.ಮಾಜಿ ಅಧ್ಯಕ್ಷ ಸಿದ್ದಪ್ಪ, ತಾಪಂ ಮಾಜಿ ಅಧ್ಯಕ್ಷ ಎಂ.ಎಚ್.ಸ್ವಾಮಿ, ತಾಲೂಕು ಆದಿ ಜಾಂಬವ ಸಂಘದ ಅಧ್ಯಕ್ಷ ಎಂ.ಲೋಕೇಶ್, ಮುಖಂಡ ಹನಸೋಗೆಸಿದ್ದಯ್ಯ, ಡಿ.ಕೆ.ಕೊಪ್ಪಲುರಾಜಯ್ಯ, ಹನಸೋಗೆ ನಾಗರಾಜು ಮಾತನಾಡಿದರು.
ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಮಿಕ್ಸರ್ ಶಂಕರ್, ಸದಸ್ಯ ಕೋಳಿ ಪ್ರಕಾಶ್, ಶಂಕರ್ ಸ್ವಾಮಿ, ಮಾಜಿ ಅಧ್ಯಕ್ಷ ಡಿ.ಕಾಂತರಾಜು, ಮುಖ್ಯಾಧಿಕಾರಿ ಬಿ.ವಿ.ವೆಂಕಟೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್.ಮಹದೇವ್, ಎಸ್.ಸಿ. ಘಟಕದ ಅಧ್ಯಕ್ಷ ಡಿ.ವಿ.ಗುಡಿನಂದೀಶ್, ವಕ್ತಾರ ಸೈಯದ್ ಜಾಬೀರ್, ತಾಪ ಮಾಜಿ ಸದಸ್ಯ ಶ್ರೀನಿವಾಸಪ್ರಸಾದ್, ಯುವ ಜೆಡಿಎಸ್ ಅಧ್ಯಕ್ಷ ಹಂಪಾಪುರಸುರೇಶ್, ಎಂಎಸ್‌ಎಸ್ ತಾಲೂಕು ಅಧ್ಯಕ್ಷ ಮಧುವನಹಳ್ಳಿ ರವಿಕುಮಾರ್, ಆರಕ್ಷಕ ನಿರೀಕ್ಷಕ ಎಸ್.ಶಿವಪ್ರಕಾಶ್, ಟಿಎಚ್‌ಒ ಡಾ.ಡಿ.ನಟರಾಜು, ಬಿಇಒ ಆರ್.ಕೃಷ್ಣಪ್ಪ, ದಸಂಸ ತಾಲೂಕು ಅಧ್ಯಕ್ಷ ಎಂ.ಎಸ್.ಮಲ್ಲೇಶ್, ವೆಂಕಟೇಶ್, ಬಿ.ಎಚ್.ಕುಮಾರ, ಕರ್ಣಕುಮಾರ ಇದ್ದರು.