ಅಂಬೇಡ್ಕರ್ ಹಾಸ್ಟೆಲ್‌ನಲ್ಲಿಲ್ಲ ಮೂಲಸೌಕರ್ಯ

ಕಳಪೆ ಆಹಾರ ನೀಡುತ್ತಿರುವುದನ್ನು ವಿರೋಧಿಸಿ ಬಾಗೇಪಲ್ಲಿಯ ಡಾ.ಬಿ.ಆರ್.ಅಂಬೇಡ್ಕರ್ ವಸತಿ ನಿಲಯದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
2
ಕಳಪೆ ಆಹಾರ ನೀಡುತ್ತಿರುವುದನ್ನು ವಿರೋಧಿಸಿ ಬಾಗೇಪಲ್ಲಿಯ ಡಾ.ಬಿ.ಆರ್.ಅಂಬೇಡ್ಕರ್ ವಸತಿ ನಿಲಯದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
Published on

ವಾರ್ಡನ್, ಅಡುಗೆ ಸಿಬ್ಬಂದಿ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಶಿಸ್ತುಕ್ರಮಕ್ಕೆ ಆಗ್ರಹ

ಬಾಗೇಪಲ್ಲಿ: ಶುಚಿತ್ವ ಇಲ್ಲದ ಕಳಪೆ ಆಹಾರ ಕೊಟ್ಟು ಮೂರು ತಿಂಗಳಿನಿಂದ ಕನಿಷ್ಠ ಸೌಲಭ್ಯಗಳನ್ನು ಕಲ್ಪಿಸದ ಹಾಸ್ಟೆಲ್ ವಾರ್ಡನ್ ನಾಗರಾಜು ವಿರುದ್ದ ಶಿಸ್ತುಕ್ರಮ ಜರುಗಿಸಿ ವಿದ್ಯಾರ್ಥಿಗಳಿಗೆ ಮೂಲಸೌಕರ್ಯ ಒದಗಿಸುವಂತೆ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಎಂ.ಜಿ.ಕಿರಣ್ ಕುಮಾರ್ ಒತ್ತಾಯಿಸಿದರು.
ಪಟ್ಟಣದ ಗೂಳೂರು ವೃತ್ತದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ವಸತಿ ನಿಲಯದ ವಿದ್ಯಾರ್ಥಿಗಳು ಹಾಸ್ಟೆಲ್ ವಾರ್ಡ್‌ನ್ ನಾಗರಾಜು ಹಾಗೂ ಅಡುಗೆ ಸಿಬ್ಬಂದಿ ವಿರುದ್ಧ ಶನಿವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದರು.
ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ವಸತಿ ನಿಲಯದಲ್ಲಿರುವ ವಿದ್ಯಾರ್ಥಿಗಳಿಗೆ ವಾರ್ಡನ್ ನಾಗರಾಜು ಕಳೆದ ಮೂರು ತಿಂಗಳಿನಿಂದ ಕನಿಷ್ಠ ಮೂಲ ಸೌಕರ್ಯಗಳನ್ನು ಒದಗಿಸಿಲ್ಲ. ಕೊಳೆತ ತರಕಾರಿ, ಕಳಪೆ ಪದಾರ್ಥಗಳನ್ನು ಬಳಸಿ ತಯಾರಿಸಿದ ರುಚಿ ಇಲ್ಲದ ಆಹಾರವನ್ನು ನೀಡುತ್ತಿದ್ದು, ವಿದ್ಯಾರ್ಥಿಗಳು ಆನಾರೋಗ್ಯದ ಸಮಸ್ಯೆ ಎದುರಿಸುತ್ತಿದ್ದಾರೆ. ವಸತಿ ನಿಲಯದ ವಿದ್ಯಾರ್ಥಿಗಳ ಹಾಜರಾತಿಯಲ್ಲಿ ಅವ್ಯವಹಾರ ನಡೆಸಿ ವಿದ್ಯಾರ್ಥಿಗಳಿಗೆ ಕೊಡಬೇಕಾಗಿರುವ ಸೌಲಭ್ಯಗಳನ್ನು ಕೊಡದೆ ತೊಂದರೆ ನೀಡುವ ಕೆಲಸಗಳು ಮಾಡುತ್ತಿರುವ ವಾರ್ಡನ್ ವಿರುದ್ದ ಶಿಸ್ತುಕ್ರಮ ಜರುಗಿಸಬೇಕು. ಸಮಾಜ ಕಲ್ಯಾಣ ಇಲಾಖೆಯಲ್ಲಿ ನಡೆಯುತ್ತಿರುವ ಅವ್ಯವಹಾರಗಳ ಸಮಗ್ರ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು.
ಪ್ರತಿಭಟನಾನಿರತ ವಿದ್ಯಾರ್ಥಿಗಳು ಮಾತನಾಡಿ, ಡಾ. ಬಿ.ಆರ್.ಅಂಬೇಡ್ಕರ್ ಪಿಯು ಕಾಲೇಜು ವಸತಿ ನಿಲಯದ ವಿದ್ಯಾರ್ಥಿಗಳಿಗೆ ಕನಿಷ್ಠ ಸೌಕರ್ಯಗಳು ಕೊಡುತ್ತಿಲ್ಲ, ಕಳಪೆ ಆಹಾರವನ್ನು ನೀಡುತ್ತಾರೆ. ವಸತಿ ನಿಲಯದ ಸಮಸ್ಯೆಗಳ ಬಗ್ಗೆ ಮೇಲಧಿಕಾರಿಗಳ ಗಮನಕ್ಕೆ ತಂದರೆ, ವಿದ್ಯಾರ್ಥಿಗಳ ಮೇಲೆ ಖಾಸಗಿ ವ್ಯಕ್ತಿಗಳ ಮೂಲಕ ಬೆದರಿಕೆ ಹಾಕಲಾಗುತ್ತಿದೆ. ಮೂಲಸೌಕರ್ಯದ ತೆಗೆ ಶುಚಿಯಾದ ಗುಣಮಟ್ಟದ ಆಹಾರ ನೀಡಬೇಕು ಎಂದು ಒತ್ತಾಯಿಸಿದರು.
ದಲಿತ ಸಂಘರ್ಷ ಸಮಿತಿ ತಾಲೂಕು ಸಂಚಾಲಕ ಎಸ್.ಎನ್.ನರಸಿಂಹಪ್ಪ, ವಸತಿ ನಿಲಯದ ವಿದ್ಯಾರ್ಥಿಗಳಾದ ವಿಷ್ಟುವರ್ಧನ್, ಆದರ್ಶ, ವೆಂಕಟೇಶ್, ಶಿವ, ನಿತಿನ್, ಗಂಗರಾಜು, ದರ್ಶನ್, ಭರತ್, ಬಾಲಾಜಿ, ಅರುಣ್, ನರೇಂಧ್ರ, ವಿಜಯ್ ಕುಮಾರ್, ಅರವಿಂದ್ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net