

ವಿಜಯಪುರ: ಜಗತ್ತಿನಲ್ಲಿಯೇ ಶ್ರೇಷ್ಠ ಸಂವಿಧಾನ ರಚಿಸಿದ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರನ್ನು ನಾವೆಲ್ಲರೂ ನಿತ್ಯ ಸ್ಮರಿಸುವುದರ ಜತೆಗೆ ಅವರ ಸಂದೇಶ ಪಾಲಿಸಬೇಕೆಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸರಳ ಮತ್ತು ಅರ್ಥಪೂರ್ಣವಾಗಿ ಭಾನುವಾರ ನಡೆದ ಜಯಂತಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಅವರು ಮಾತನಾಡಿದರು.
ಡಾ. ಅಂಬೇಡ್ಕರ್ ಅವರು ಹಿಂದುಳಿದ ವರ್ಗ ಸೇರಿ ಬಡ ದೀನ ದಲಿತರ ಜೀವನ ಮಟ್ಟ ಸುಧಾರಿಸಲು ಶ್ರಮಿಸಿದರು. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಮಾನ ಅವಕಾಶ ಕಲ್ಪಿಸಿ, ಮೂಲ ಸೌಲಭ್ಯಗಳೊಂದಿಗೆ ಸುಭದ್ರ ಜೀವನ ಕಟ್ಟಿಕೊಳ್ಳಬೇಕೆಂಬುದು ಆಶಯ ಹೊಂದಿದ್ದರು ಎಂದರು.
ಡಾ. ಬಿ.ಆರ್. ಅಂಬೇಡ್ಕರ್ ಅವರ ಆದರ್ಶಗಳು, ಸಂವಿಧಾನದ ಆಶಯಗಳ ಕುರಿತು ಪ್ರತಿಯೊಬ್ಬ ನಾಗರಿಕ ಕೂಡ ಅರಿವು ಹೊಂದಬೇಕು. ಈ ನಿಟ್ಟಿನಲ್ಲಿ ಪ್ರತಿಯೊಂದು ಮನೆ& ಶಾಲೆಯಲ್ಲಿ ಅವರ ಆದರ್ಶ, ವಿಚಾರಗಳ ಕುರಿತು ಅರಿವು ಸಂವಿಧಾನ ಜಾಗೃತಿ ಜಾಥಾ ಮೂಲಕ ಅರಿವು ಮೂಡಿಸಲಾಗುತ್ತಿದೆ.
ಹಾನ್ ನಾಯಕರ ಸ್ಮರಣೆ ಕೇವಲ ಜಯಂತಿಗೆ ಮಾತ್ರ ಸಿಮೀತವಾಗದೆ ಪ್ರತಿನಿತ್ಯ, ಪ್ರತಿಕ್ಷಣವೂ ಸ್ಮರಿಸುವಂತಹ ಕಾರ್ಯವಾಗಬೇಕಿದೆ ಎಂದು ಹೇಳಿದರು.
ಜಿಪಂ ಸಿಇಒ ರಿಷಿ ಆನಂದ, ಎಸ್ಪಿ ಋಷಿಕೇಶ ಸೋನಾವಣೆ ಮಾತನಾಡಿದರು.
ಕಾರ್ಯಕ್ರಮಕ್ಕೂ ಮುನ್ನ ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿರುವ ಪುತ್ಥಳಿಗೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಮಾಲಾರ್ಪಣೆ ನೆರವೇರಿಸಿ ಗೌರವ ಸಲ್ಲಿಸಿದರು.
ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ತಹಸೀಲ್ದಾರ್ ಕವಿತಾ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪುಂಡಲೀಕ ಮಾನವರ, ಅಭಿಷೇಕ ಚಕ್ರವರ್ತಿ, ಸಿದ್ದು ರಾಯಣ್ಣನವರ, ಅಡಿವೆಪ್ಪ ಸಾಲಗಲ್, ಫಯಾಜ ಕಲಾದಗಿ, ಆನಂದ ಔದಿ, ಎಂ.ಸಿ. ಮುಲ್ಲಾ, ರವಿ ಕಿತ್ತೂರ, ಅರುಣ ಗವಾರಿ, ಪ್ರಶಾಂತ ತೊರವಿ, ಚಂದ್ರಶೇಖರ ಚಕ್ರವರ್ತಿ, ಮಲ್ಲು ಬಿದರಿ ಮತ್ತಿತರರಿದ್ದರು.