

ನೆಲಮಂಗಲ: ಅಂಬೇಡ್ಕರ್ ಅವರ ಸಿದ್ಧಾಂತ, ತತ್ವಾದರ್ಶ ಪ್ರತಿಯೊಬ್ಬರಿಗೆ ಮಾರ್ಗದರ್ಶಕ ಎಂದು ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ ಅಭಿಪ್ರಾಯಪಟ್ಟರು.
ತಾಲೂಕು ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಅಂಬೇಡ್ಕರ್ ಜಯಂತಿಯಲ್ಲಿ ಮಾತನಾಡಿದರು.
ಅಂಬೇಡ್ಕರ್ ಮತ್ತು ಜಗಜೀವನ್‌ರಾಂ ಅವರ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲು ವಿಘ್ನ ಎದುರಾಗುತ್ತಿದೆ ಎಂದು ಬೇಸರಿಸಿದರು.
ಗೊಂದಲ ನಿವಾರಿಸಿ: ತಾಲೂಕಿನಲ್ಲಿ ಅಂಬೇಡ್ಕರ್ ಅವರ ಪುತ್ಥಳಿ ನಿರ್ಮಾಣ ವಿಚಾರವಾಗಿ ಈಗಾಗಲೇ ಕೆಲ ಸಮುದಾಯದ ಮುಖಂಡರು ಸಭೆ ಡೆಸಿದ್ದಾರೆ. ಆದರೆ ನಿಯಮಾನುಸಾರ ಸಮಿತಿ ರಚನೆ ಮಾಡುವುದು, ಪುತ್ಥಳಿ ನಿರ್ಮಾಣದ ಜಾಗ ಮತ್ತು ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕಿದ್ದು, ತಾಲೂಕು ಆಡಳಿತ ಕೆಲ ತೀರ್ಮಾನ ತಗೆದುಕೊಂಡು ಗೊಂದಲಗಳಿಗೆ ತೆರೆ ಎಳೆಯಬೇಕು ಎಂದು ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಬಿ.ಆರ್.ಭಾಸ್ಕರ್ ಪ್ರಸಾದ್ ಮನವಿ ಮಾಡಿದರು.
ತಹಸೀಲ್ದಾರ್ ಎಂ.ಶ್ರೀನಿವಾಸಯ್ಯ, ತಾಪಂ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮೀನಾರಾಯಣ್, ಕ್ಷೇತ್ರಶಿಕ್ಷಣಾಧಿಕಾರಿ ರಮೇಶ್, ಶಿರಸ್ತೇದಾರ ಶ್ರೀನಿವಾಸ್‌ಮೂರ್ತಿ, ರಾಜಸ್ವ ನಿರೀಕ್ಷಕ ಸುದೀಪ್, ದಲಿತಕೂಲಿ ಮತ್ತು ಕಾರ್ಮಿಕ ಸಂಘಟನೆ ಅಧ್ಯಕ್ಷ ಬಿ.ಎಂ.ಗಂಗಬೈಲಪ್ಪ, ನಮ್ಮ ಕರ್ನಾಟಕ ಜನಸೈನ್ಯ ಸಂಘಟನೆ ಅಧ್ಯಕ್ಷ ಬಿ.ನರಸಿಂಹಯ್ಯ, ತಾಲೂಕು ವಾಲ್ಮೀಕಿ ಸಂಘದ ಅಧ್ಯಕ್ಷ ನರಸಿಂಹಮೂರ್ತಿ, ದಲಿತ ಸಂಘಟನೆಗಳ ಒಕ್ಕೂಟ ರಾಜ್ಯ ಸಂಚಾಲಕ ನಾರಾಯಣಸ್ವಾಮಿ, ತಾಲೂಕು ಅಧ್ಯಕ್ಷ ನಾರಾಯಣಮೂರ್ತಿ, ಗ್ರಾಪಂ ಅಧ್ಯಕ್ಷೆ ಮಂಜಮ್ಮ, ಮುಖಂಡರಾದ ಕನ್ನಡರೆಹಮಾನ್, ಗೋವಿಂದರಾಜು, ಎಸ್.ಎಚ್.ವೆಂಕಟೇಶ್, ಎಂ.ಶಿವಕುಮಾರ್ ಉಪಸ್ಥಿತರಿದ್ದರು.