

ಹುನಗುಂದ: ಸಂವಿಧಾನ ಶಿಲ್ಪಿ ಡಾ. ಬಿ. ಆರ್.ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳನ್ನು ವಿರೋಧಿಸುವ ಮನುವಾದಿಗಳಿಂದ ದೂರವಿರಿ ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.
ಪಟ್ಟಣದ ವಿಜಯಮಹಾಂತೇಶ ವೃತ್ತದಲ್ಲಿ ತಾಲೂಕು ಆಡಳಿತ, ಪುರಸಭೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ದಲಿತ ಸಂಘಟನೆಗಳ ಒಕ್ಕೂಟದ ಸಹಯೋಗದಲ್ಲಿ ಆಯೋಜಿಸಿದ್ದ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ 134ನೇ ಜಯಂತ್ಯುತ್ಸವ ಉದ್ಘಾಟಿಸಿ ಅವರು ಮಾತನಾಡಿದರು.
ದೇಶದ ಇತಿಹಾಸ ಪುಟದಲ್ಲಿ ಅಂಬೇಡ್ಕರ್ ಅವರ ಹೆಸರು ಅವಿಸ್ಮರಣೀಯ. ಶಿಕ್ಷಣ ಪಡೆದು ಸಂಘಟಿತರಾಗಿ ಅನ್ಯಾಯದ ವಿರುದ್ಧ ಹೋರಾಡಿದಾಗ ಮಾತ್ರ ನ್ಯಾಯ ಪಡೆಯಲು ಸಾಧ್ಯ ಎಂದರು.
ಉಪನ್ಯಾಸಕ ಸಿದ್ದಲಿಂಗಪ್ಪ ಬೀಳಗಿ ಹಾಗೂ ನಿವೃತ್ತ ಶಿಕ್ಷಕ ಬಸವರಾಜ ಮಸ್ಕಿ ಉಪನ್ಯಾಸ ನೀಡಿದರು. ತಹಸೀಲ್ದಾರ್ ನಿಂಗಪ್ಪ ಬಿರಾದಾರ, ಡಿವೈಎಸ್ಪಿ ವಿಶ್ವನಾಥ ಕುಲಕರ್ಣಿ, ಪುರಸಭೆ ಅಧ್ಯಕ್ಷೆ ಭಾಗ್ಯಶ್ರೀ ರೇವಡಿ, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಮುತ್ತಣ್ಣ ಕಲಗೋಡಿ, ಉಪಾಧ್ಯಕ್ಷೆ ರಾಜವ್ವ ಬದಾಮಿ, ತಾಲ್ಲೂಕು ಪಂಚಾಯಿತಿ ಇಒ ಮುರುಳಿಧರ ದೇಶಪಾಂಡೆ, ಅಮೀನಗಡ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಬೇಬಿ ಚವ್ಹಾಣ, ಕಮಲವ್ವ ಸಂದಿಮನಿ, ಶಿವಾನಂದ ಕಂಠಿ, ಯಲ್ಲಪ್ಪ ನಡುವಿನಮನಿ, ರವಿ ಮಸ್ಕಿ ಮತ್ತಿತರರಿದ್ದರು.