ಉಯಿಗೌಡನಹಳ್ಳಿ ಹೊಸೂರಿನಲ್ಲಿ ಅಂಬೇಡ್ಕರ್ ಜಯಂತಿ

HUN-MAY-5-3(AMBEDKER JAYANTHI)
ಹುಣಸೂರು ತಾಲೂಕು ಉಯಿಗೌಡನಹಳ್ಳಿ ಹೊಸೂರು ಗ್ರಾಮದಲ್ಲಿ ಆಯೋಜಿಸಿದ್ದ ಅಂಬೇಡ್ಕರ್ ಜಯಂತಿ ಸಮಾರಂಭವನ್ನು ಮಾಜಿ ಶಾಸಕ ಎಚ್.ಪಿ.ಮಂಜುನಾಥ್ ಉದ್ಘಾಟಿಸಿದರು. ಮುಖಂಡರಾದ ಬಸವಲಿಂಗಯ್ಯ, ಎಚ್.ಎಸ್.ಕುಮಾರ್, ಹರಿಹರ ಆನಂದಸ್ವಾಮಿ ಇತರರಿದ್ದಾರೆ.
Published on

ಹುಣಸೂರು: ಸಂವಿಧಾನಶಿಲ್ಪಿ ಅಂಬೇಡ್ಕರ್‌ರ ಗುಣಗಾನ ಮಾಡುವುದಕ್ಕಿಂತ ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಮುಖ್ಯವೆಂದು ಮಾಜಿ ಶಾಸಕ ಎಚ್.ಪಿ.ಮಂಜುನಾಥ್ ಅಭಿಪ್ರಾಯಪಟ್ಟರು.

ತಾಲೂಕಿನ ಉಯಿಗೌಡನಹಳ್ಳಿ ಹೊಸೂರು ಗ್ರಾಮದಲ್ಲಿ ಭಾನುವಾರ ಅಂಬೇಡ್ಕರ್ ಯುವಕರ ಸಂಘ ವತಿಯಿಂದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಮಾರಂಭದಲ್ಲಿ ಡಾ. ಅಂಬೇಡ್ಕರ್ ಪ್ರಶಸ್ತಿ ಪುರಸ್ಕೃತ ಹರಿಹರ ಆನಂದ ಸ್ವಾಮಿ ಅವರನ್ನು ಸನ್ಮಾನಿಸಲಾಯಿತು. ಹುಣಸೂರು ಟಿಎಪಿಎಂಎಸ್ ಮಾಜಿ ಅಧ್ಯಕ್ಷ ಬಸವಲಿಂಗಯ್ಯ, ಅಕ್ರಮ-ಸಕ್ರಮ ಸಮಿತಿ ಸದಸ್ಯ ಎಚ್.ಎಸ್.ಕುಮಾರ್, ರೋಟರಿ ಸಂಸ್ಥೆ ಅಧ್ಯಕ್ಷ ಪ್ರಸನ್ನ, ಶಿಕ್ಷಕ ಚಿಲ್ಕುಂದ ಮಹೇಶ್, ಮುಖಂಡರಾದ ಚಂದ್ರಶೇಖರ, ಸೋಮಯ್ಯ, ಮಹೇಶ, ಪುಟ್ಟಸ್ವಾಮಿ, ಸಂಘದ ಅಧ್ಯಕ್ಷ ಚಂದ್ರು ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net