ಅಂಬೇಡ್ಕರ್ ಜಯಂತಿ ಅದ್ದೂರಿ ಆಚರಣೆ

17Anand7
ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಕಾರಿ ಮೊಹಮ್ಮದ್ ರೋಷನ್‌ಮಾತನಾಡಿದರು. ರಾಹುಲ್ ಶಿಂಧೆ, ಡಾ.ಭೀಮಾಶಂಕರ ಗುಳೇದ ಇತರರಿದ್ದರು.
Published on

ಬೆಳಗಾವಿ: ಭಾರತರತ್ನ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಏ.14ರಂದು ಅದ್ದೂರಿಯಾಗಿ ಆಚರಿಸಲಾಗುವುದು. ಈ ನಿಟ್ಟಿನಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಕಾರಿ ಮೊಹಮ್ಮದ್ ರೋಷನ್ ತಿಳಿಸಿದರು.

ನಗರದ ಜಿಪಂ ಸಭಾಂಗಣದಲ್ಲಿ ಸೋಮವಾರ ನಡೆದ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಜ್ಯೋತಿ ಬೆಳಗ್ಗೆ 10 ಗಂಟೆಗೆ ಬರಮಾಡಿಕೊಂಡು ಅಂಬೇಡ್ಕರ್ ಉದ್ಯಾನದಲ್ಲಿ ಅಂಬೇಡ್ಕರ್ ಪುತ್ಥಳಿಗೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಲಾಗುವುದು. ನಗರದ ಧರ್ಮವೀರ ಸಂಭಾಜಿ ವತ್ತದಿಂದ ಮೆರವಣಿಗೆ ನಡೆಯಲಿದೆ. ಬಳಿಕ ಸಂಜೆ 4 ಗಂಟೆಗೆ ಅಂಬೇಡ್ಕರ್ ಉದ್ಯಾನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಸಮುದಾಯದ ಮುಖಂಡರ ಸಲಹೆಯಂತೆ ಅಂಬೇಡ್ಕರ್ ಕುರಿತು ಅಧ್ಯಯನ ಕೆಗೊಂಡಿರುವ ಸಂಪನ್ಮೂಲ ವ್ಯಕ್ತಿಗಳನ್ನು ಉಪನ್ಯಾಸಕ್ಕೆ ಆಹ್ವಾನಿಸಬೇಕು ಎಂದು ತಿಳಿಸಿದರು.

ಸಮಾಜದ ಮುಖಂಡ ಮಲ್ಲೇಶ ಚೌಗಲಾ ಮಾತನಾಡಿ, ನಿಗದಿತ ಸಮಯದೊಳಗೆ ಮೆರವಣಿಗೆ, ವೇದಿಕೆ ಕಾರ್ಯಕ್ರಮ ನಡೆಯಬೇಕು. ಏಪ್ರಿಲ್ ಮೊದಲ ವಾರದಿಂದ ಶಾಲಾ ಮಕ್ಕಳಿಗೆ ರಜೆ ಇರುವ ಕಾರಣ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಕುರಿತು ಮುಂಚಿತವಾಗಿಯೇ ವಿಚಾರ ಸಂಕಿರಣ ನಡೆಸಬೇಕು ಎಂದು ವಿನಂತಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಡಾ.ಭೀಮಾಶಂಕರ ಗುಳೇದ ಮಾತನಾಡಿ, ಪ್ರತಿವರ್ಷದಂತೆ ಅಂಬೇಡ್ಕರ್ ಜಯಂತಿ ಆಚರಣೆಗೆ ಅಗತ್ಯ ಭದ್ರತಾ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು. ಜಿಪಂ ಸಿಇಒ ರಾಹುಲ್ ಶಿಂಧೆ ಮಾತನಾಡಿ, ಯಾವುದೇ ಲೋಪದೋಷಗಳು ಆಗದಂತೆ ಅಚ್ಚುಕಟ್ಟಾಗಿ ಜಯಂತಿ ಆಚರಣೆಗೆ ಮಾಡಲು ಜಿಪಂ ವತಿಯಿಂದ ಸೂಚನೆ ನೀಡಲಾಗುವುದು ಎಂದು ಹೇಳಿದರು.

ಪಾಲಿಕೆ ಆಯುಕ್ತೆ ಶುಭ. ಬಿ., ಎಸಿಪಿ ಸದಾಶಿವ ಕಟ್ಟಿಮನಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಾಮನಗೌಡ ಕನ್ನೊಳ್ಳಿ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಕಾರಿ ಬಸವರಾಜ ಕುರಿಹುಲಿ, ಕಷಿ ಇಲಾಖೆ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ, ಜಿಲ್ಲಾ ನಗರಾಭಿವದ್ಧಿ ಕೋಶದ ಯೋಜನಾ ನಿರ್ದೇಶಕ ಮಲ್ಲಿಕಾರ್ಜುನ ಕಲಾದಗಿ, ಪಶು

ಸಂಗೋಪನಾ ಇಲಾಖೆ ಉಪ ನಿರ್ದೇಶಕ ಡಾ. ರಾಜೀವ ಕೂಲೇರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net