ವಂಡ್ಸೆ ಸರ್ಕಾರಿ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ

gan-14
Published on

ಕುಂದಾಪುರ: ವಂಡ್ಸೆ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಅಂಬೇಡ್ಕರ್ ಜಯಂತಿ ಆಚರಿಸಲಾಯಿತು. ಕರ್ಕುಂಜೆ ಕ್ಲಸ್ಟರ್ ಸಿ.ಆರ್.ಪಿ ರವಿಚಂದ್ರ ಹಾಗೂ ಶಾಲಾ ಪ್ರಭಾರ ಮುಖ್ಯ ಶಿಕ್ಷಕ ಸೋಮರಾಯ ಜನ್ನು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ವಂಡ್ಸೆ ಕ್ಲಸ್ಟರ್ ಸಿ.ಆರ್.ಪಿ ನಾಗರಾಜ ಶೆಟ್ಟಿ, ಸಹ ಶಿಕ್ಷಕಿ ವಾಣಿಶ್ರೀ ಹಾಗೂ ಶಾಲಾ ವಿದ್ಯಾರ್ಥಿ ನಾಯಕಿ ಆರಾಧ್ಯಾ ಡಾ.ಅಂಬೇಡ್ಕರ್ ಜೀವನ ಚರಿತ್ರೆ ಮತ್ತು ಸಾಧನೆ ಕುರಿತು ಮಾತನಾಡಿದರು. ವಿದ್ಯಾರ್ಥಿ ನಾಯಕ ಸುಮಂತ್ ಹಾಗೂ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸೋಮರಾಯ ಜನ್ನು ಸ್ವಾಗತಿಸಿದರು. ಸಹ ಶಿಕ್ಷಕ ಪ್ರತಾಪ್ ಕುಮಾರ್ ಶೆಟ್ಟಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net