ಯಡೂರಿನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

16SPT7
ಸೋಮವಾರಪೇಟೆ ಸಮೀಪದ ಯಡೂರು ಗ್ರಾಮದ ಬಿ.ಟಿ. ಚನ್ನಯ್ಯ ಗೌರಮ್ಮ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ಆಯೋಜಿಸಿದ್ದ ಡಾ. ಬಿ.ಆರ್.ಅಂಬೇಡ್ಕರ್ ಅವರ 134 ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಡಿಕೇರಿ ಮಹಾಬೋಧಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ಮೋಹನ್ ಮೌರ್ಯ ಮಾತನಾಡಿದರು. ಹರ್ಷ, ಸುನೀತಾ, ಧನಲಕ್ಷ್ಮೀ ಇದ್ದರು.
Published on

ಸೋಮವಾರಪೇಟೆ: ಯಡೂರು ಗ್ರಾಮದ ಬಿ.ಟಿ.ಚನ್ನಯ್ಯ ಗೌರಮ್ಮ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮ ದಿನವನ್ನು ಬುಧವಾರ ಆರ್ಥಪೂರ್ಣವಾಗಿ ಆಚರಿಸಲಾಯಿತು.

ಮಡಿಕೇರಿ ಮಹಾಬೋಧಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಮೋಹನ್ ಮೌರ್ಯ ಮಾತನಾಡಿ, ದೇಶದಲ್ಲಿ ಉದ್ಯೋಗ, ಕಾನೂನಿನಲ್ಲಿ ಸಮಾನತೆ, ಮಹಿಳಾ ಮತ್ತು ಕಾರ್ಮಿಕರ ಸುಧಾರಣಾ ಕ್ರಮಗಳನ್ನು ಜಾರಿಗೆ ತರುವ ಮೂಲಕ ನೊಂದವರ ಪರವಾಗಿ ಅಂಬೇಡ್ಕರ್ ಕೆಲಸ ಮಾಡಿದರು. ದೇಶದಲ್ಲಿ ಮೀಸಲಾತಿಯ ಮೂಲಕ ಸಮಾಜದಲ್ಲಿ ತುಳಿತಕ್ಕೊಳಗಾದವರ ಪರವಾಗಿ ಸಾಕಷ್ಟು ಕೊಡುಗೆಗಳನ್ನು ನೀಡಿದ್ದಾರೆ. ಅವರ ಆದರ್ಶಗಳನ್ನು ಎಲ್ಲರೂ ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು.

ಡಾ. ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಡಿ.ಹರ್ಷ, ಪ್ರಾಧ್ಯಾಪಕರಾದ ಎಂ.ಎಂ. ಸುನೀತಾ, ಧನಲಕ್ಷ್ಮೀ, ಹುಚ್ಚೇಗೌಡ ಅವರು ಪುಷ್ಪನಮನ ಸಲ್ಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net