ಪಟ್ಟಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ ಉಲ್ಲೇಖಿಸಿಲ್ಲ

14 SARAG 1
filter: 0; fileterIntensity: 0.000000; filterMask: 0; captureOrientation: 0; shaking: 0.205681; highlight: 1; algolist: 0; multi-frame: 1; brp_mask: 0; brp_del_th: 0.0000,0.0000; brp_del_sen: 0.0000,0.0000; delta:null; module: photo;hw-remosaic: false;touch: (-1.0, -1.0);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;HdrStatus: auto;albedo: ;confidence: ;motionLevel: 0;weatherinfo: null;temperature: 31;
Published on

ಸರಗೂರು: ಏಪ್ರಿಲ್ ತಿಂಗಳಲ್ಲಿ ಆಚರಿಸಬೇಕಾದ ಜಯಂತಿಗಳ ಪಟ್ಟಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಗಳವಾರ ಪ್ರಕಟಿಸಿದ್ದು, ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ ಬಗ್ಗೆ ಉಲ್ಲೇಖಿಸಿಲ್ಲ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ಸಂಘಟನೆಯ ಪದಾಧಿಕಾರಿಗಳು ಆರೋಪಿಸಿದರು.

ತಾಲೂಕು ಸಂಚಾಲಕ ಕೂಡಗಿ ಗೊವಿಂದರಾಜು ಮಾತನಾಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವಿವಿಧ ನಾಯಕರ ಜಯಂತಿಯ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅದರೆ ಏಪ್ರಿಲ್, ಮೇ ತಿಂಗಳಿನಲ್ಲಿ ಆಚರಿಸಬೇಕಾದ ಜಯಂತಿಗಳ ಪಟ್ಟಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಕಟಿಸಿಲ್ಲ. ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ ಬಗ್ಗೆ ಉಲ್ಲೇಖಿಸಿಲ್ಲ ಎಂದು ದೂರಿದರು.

ಏಪ್ರಿಲ್ ತಿಂಗಳಲ್ಲಿ ಚುನಾವಣೆ ಮಾಡುತ್ತಾರೆ. ಹೀಗಾಗಿ ಚುನಾವಣೆ ನೀತಿ ಸಂಹಿತೆ ಜಾರಿಯಾಗುತ್ತದೆ. ಇದರಿಂದ ಅಂಬೇಡ್ಕರ್ ಜಯಂತಿಯನ್ನು ವಿಜೃಂಭಣೆಯಿಂದ ಆಚರಣೆ ಮಾಡಲು ನೀತಿ ಸಂಹಿತೆ ಅಡ್ಡಿಯಾಗುತ್ತದೆ. ಹಾಗಾಗಿ ಎಲ್ಲ ಚುನಾವಣೆಗಳನ್ನು ಏಪ್ರಿಲ್ ತಿಂಗಳು ಬಿಟ್ಟು ಬೇರೆ ತಿಂಗಳಲ್ಲಿ ಮಾಡಿ ಎಂದು ಸರ್ಕಾರವನ್ನು ಆಗ್ರಹಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಗ್ರೇಡ್-2 ತಹಸೀಲ್ದಾರ್ ಪರಶಿವಮೂರ್ತಿ, ಈ ಕುರಿತು ಜಿಲ್ಲಾಧಿಕಾರಿ ಕಚೇರಿಗೆ ಪತ್ರ ರವಾನಿಸಲಾಗುತ್ತದೆ ಎಂದು ಹೇಳಿದರು.

ತಾಲೂಕು ದಸಂಸ(ಅಂಬೇಡ್ಕರ್ ವಾದ) ಉಪ ಸಂಚಾಲಕ ಚಂದ್ರ, ಸಂಘಟನೆ ಸಂಚಾಲಕ ಮೊಳೆಯೂರು ಕಾವಲ್ ನಾಗೇಂದ್ರ, ಕೂಲ್ಯ ಮಹದೇವಸ್ವಾಮಿ, ಕರ್ನಾಟಕ ಭೀಮಾ ಸೇನೆ ತಾಲೂಕು ಅಧ್ಯಕ್ಷ ಹೂವಿನಕೊಳ ಮಹೇಂದ್ರ, ಹಳೆಯೂರು ಮೂರ್ತಿ, ಶಿವರಾಜು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net