

ಗುಂಡ್ಲುಪೇಟೆ : ತಾಲೂಕಿನ ಅಗತಗೌಡನಹಳ್ಳಿ ಗ್ರಾಮದಲ್ಲಿ ಭಾನುವಾರ ಡಾ.ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಸಮಿತಿ ವತಿಯಿಂದ ಡಾ.ಬಿ.ಆರ್. ಅಂಬೇಡ್ಕರ್ ಅವರ 134 ನೇ ಜಯಂತಿ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.
ಜೇತವನ ಬುದ್ಧ ವಿಹಾರ, ಚೆನ್ನಾಲಿಂಗನಹಳ್ಳಿ ಮಠದ ಮನೋರಕ್ಖಿತ ಭಂತೇಜಿ, ಉರಿಲಿಂಗ ಪೆದ್ದಿ ಮಠದ ಶ್ರೀ ಜ್ಞಾನ ಪ್ರಕಾಶ ಸ್ವಾಮೀಜಿ, ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ. ಮಹದೇವಪ್ಪ, ಶಾಸಕರಾದ ಎಚ್.ಎಂ.ಗಣೇಶ ಪ್ರಸಾದ್, ಎ. ಆರ್ ಕೃಷ್ಣಮೂರ್ತಿ, ಸಾಹಿತಿ ಪ್ರೊ.ಕೆ.ಎಸ್.ಭಗವಾನ್ ಸೇರಿದಂತೆ ಗ್ರಾಮಸ್ಥರು ಇದ್ದರು.