

ಕಾರವಾರ: ದೀನದಲಿತರು, ಶೋಷಿತರು ಹಾಗೂ ಮಹಿಳೆಯರ ಹಕ್ಕುಗಳಿಗಾಗಿ ಹೋರಾಡಿ, ಎಲ್ಲರಿಗೂ ಸಮಾನತೆ ದೊರಕಿಸಿಕೊಡಲು ತಮ್ಮ ಸರ್ವಸ್ವವನ್ನು ತ್ಯಾಗ ಮಾಡಿದ ಮಹಾನ್ ವ್ಯಕ್ತಿ ಡಾ.ಬಿ.ಆರ್.ಅಂಬೇಡ್ಕರ್ ಎಂದು 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಧಿಶ ಮಾಯಣ್ಣ ಬಿ.ಎಲ್ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆಯಿಂದ ನಗರದ ಜಿಲ್ಲಾ ರಂಗ ಮಂದಿರದಲ್ಲಿ ಭಾನುವಾರ ಆಯೋಜಿಸಿದ್ದ ಡಾ. ಬಿ.ಆರ್. ಅಂಬೇಡ್ಕರ್ ರವರ 133ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಅಂಬೇಡ್ಕರ್ ಅವರು ಜ್ಞಾನದ ಹಿಮಾಲಯ, ಜ್ಞಾನದ ರತ್ನವಾಗಿದ್ದರು. 32 ಕ್ಕೂ ಅಕ ಪದವಿ ಪಡೆದ ಏಕೈಕ ವ್ಯಕ್ತಿ. ಅದಕ್ಕೇ ಏ.14 ನ್ನು ವಿಶ್ವ ಜ್ಞಾನ ದಿನ ಎಂದು ಆಚರಿಸಲಾಗುತ್ತದೆ ಎಂದರು.
ಅವರು ಸ್ವತಂತ್ರ ಭಾರತದ ಮೊದಲ ಕಾನೂನು ಮಂತ್ರಿ, ಅರ್ಥಶಾಸ್ತಜ್ಞ, ನ್ಯಾಯಶಾಸ್ತಜ್ಞ ಹಾಗೂ ಸಮಾಜ ಸುದಾಕರಾಗಿದ್ದವರು. ಮಹಿಳೆಯರು ಸಮಾಜದಲ್ಲಿ ಅನುಭವಿಸಿದ ಅನ್ಯಾಯವನ್ನು ಮನಗಂಡು ಸಮಾಜದಲ್ಲಿನ ತಾರತಮ್ಯ ಹೋಗಲಾಡಿಸಿ ಸಮಾನತೆಯನ್ನು ತರುವ ಉದ್ದೇಶದಿಂದ ಕಾನೂನು ಮಂತ್ರಿಯಾಗಿದ್ದಾಗ ಹಿಂದೂ ಕೋಡ್ ಬಿಲ್ ಸಂಸತ್ತಿನಲ್ಲಿ ಅಂಗೀಕಾರವಾಗದಿದ್ದರಿಂದ ತಮ್ಮ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರು ಎಂದು ವಿವರಿಸಿದರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್,ದೇಶದಲ್ಲಿ ಪ್ರತಿಯೊಬ್ಬರಿಗೂ ಸಮಾನತೆ ಸಿಗಬೇಕು ಎಂಬುದು ಅಂಬೇಡ್ಕರ್ ಆಶಯವಾಗಿತ್ತು. ಇಂತಹ ಮಹಾನ ನಾಯಕ ರಚಿಸಿದ ಸಂವಿಧಾನದ ಆಶಯಗಳನ್ನು ಪ್ರತಿಯೊಬ್ಬರು ಅರ್ಥಮಾಡಿಕೊಂಡಾಗ ಮತ್ರ ಸಂವಿಧಾನದ ಆಶಯಗಳಿಗೆ ಗೌರವ ಸೂಚಿಸಿದಂತಾಗುತ್ತದೆ ಎಂದರು.
ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ ಮತ್ತು ಸ್ನಾತಕೋತ್ತರ ಪದವಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ಹಾಗೂ ಸಮಾಜ ಕಲ್ಯಾಣ ಇಲಾಖೆಯ ವಿವಿಧ ಯೋಜನೆಯಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಸಹಾಯಧನ ವಿತರಿಸಲಾಯಿತು. ಕಾನೂನು ಸೇವೆಗಳ ಪ್ರಾಽಕಾರದ ಸದಸ್ಯ ಕಾರ್ಯದರ್ಶಿ ರೇಣುಕಾ ಡಿ. ರಾಯ್ಕರ್, ಡಿಎಫ್‌ಒ ಸಿ.ರವಿಶಂಕರ, ಎಸಿ ಕನಿಷ್ಕ ಇದ್ದರು. ನಿವೃತ್ತ ಪ್ರಾಧ್ಯಾಪಕ ಎಂ.ಆರ್. ನಾಯಕ ಉಪನ್ಯಾಸ ನೀಡಿದರು. ಸಮಾಜ ಕಲ್ಯಾಣ ಇಲಾಖೆ ಉಪ ನಿದೇಶಕ ಅಜ್ಜಪ್ಪ ಸೊಗಲದ್ ಸ್ವಾಗತಿಸಿದರು.
ಇದನ್ನೂ ಓದಿ: ಮೃತ ವೃದ್ಧೆಯ ಕಣ್ಣುಗಳನ್ನು ದಾನ ಮಾಡಿದ ಮಕ್ಕಳು