

ರಾಜ್ಯ ರಸ್ತೆ ಸಾರಿಗೆ ನಿಗಮದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಧಿಕಾರಿಗಳು ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಸೆ.9ರಂದು ಮಧ್ಯಾಹ್ನ 2.30ಕ್ಕೆ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ, ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರಿಗೆ ಸನ್ಮಾನ ಸಮಾರಂಭವನ್ನು ನಗರದ ಜಗನ್ಮೋಹನ ಅರಮನೆ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಮೈಸೂರು ವಿಭಾಗದ ಅಧ್ಯಕ್ಷ ಸ್ವಾಮಿ ತಿಳಿಸಿದರು.
ಶ್ರೀ ಜ್ಞಾನಪ್ರಕಾಶ ಸ್ವಾಮೀಜಿ ಹಾಗೂ ಬೋಧಿರತ್ನ ಬಂತೇಜಿ ಸಾನ್ನಿಧ್ಯ ವಹಿಸುವರು. ಸಚಿವ ರಾಮಲಿಂಗಾರೆಡ್ಡಿ ಉದ್ಘಾಟಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಭಾವಚಿತ್ರ ಅನಾವರಣ ಮಾಡುವರು. ಶಾಸಕ ತನ್ವೀರ್‌ಸೇಠ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಶಾಸಕ ಕೆ.ಹರೀಶ್‌ಗೌಡ, ವಿಧಾನ ಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ ಸೇರಿದಂತೆ ಹಲವರು ಭಾಗವಹಿಸುವರು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಮುಖಂಡರಾದ ಎನ್.ರವೀಂದ್ರ, ಮಹದೇವಸ್ವಾಮಿ ಹಾಜರಿದ್ದರು.