

ಕೊಳ್ಳೇಗಾಲ: ಡಾ.ಬಿ.ಆರ್.ಅಂಬೇಡ್ಕರ್ ಸ್ಮಾರಕ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ಪಟ್ಟಣದ ಅಂಬೇಡ್ಕರ್ ಸಮುದಾಯ ಭವನದಲ್ಲಿ ಮೇ 11ರಂದು ನಡೆಸಲಾಗುವುದು ಎಂದು ಸಂಘದ ಅಧ್ಯಕ್ಷ ಎಸ್.ಆನಂದ ಮೂರ್ತಿ ತಿಳಿಸಿದರು.
ಪಟ್ಟಣದಲ್ಲಿ ನಿರ್ಮಾಣ ಹಂತದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಸ್ಮಾರಕ ಭವನಕ್ಕೆ ಬುಧವಾರ ಕೆಆರ್‌ಐಡಿಎಲ್ ಎಇಇ ಚಿಕ್ಕಲಿಂಗಯ್ಯ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಕೇಶವಮೂರ್ತಿ ಹಾಗೂ ಸಂಘದ ಪದಾಧಿಕಾರಿಗಳ ಜತೆ ಪರಿಶೀಲಿಸಿದ ಬಳಿಕ ಮಾತನಾಡಿದರು.
ಮೇ 11 ರಂದು ಭೀಮನಗರದ ಡಾ.ಬಿ.ಆರ್.ಅಂಬೇಡ್ಕರ್ ಸ್ಮಾರಕ ಸಂಘದ ಪದಾಧಿಕಾರಿಗಳ ಪದಗ್ರಹಣ ಆಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಮುದಾಯ ಭವನವನ್ನು ವ್ಯವಸ್ಥಿತ ರೀತಿಯಲ್ಲಿ ಸಜ್ಜುಗೊಳಿಸಲು ಸಂಘದ ಪದಾಧಿಕಾರಿಗಳು ಹಾಗೂ ಭೀಮನಗರ ಮುಖಂಡರು ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದೇವೆ.
ಭವನದ ಕೊಠಡಿಗಳು, ಹಾಲ್ ಹಾಗೂ ಗೋಡೆಗಳು ಧೂಳಿನಿಂದ ಕೂಡಿರುವುದರಿಂದ ಕೆಆರ್‌ಡಿಎಲ್‌ಐ ಅಧಿಕಾರಿಗಳಿಗೆ ಸಮಾರಂಭ ಹಿನ್ನೆಲೆ ಸ್ವಚ್ಛತಾ ಕಾರ್ಯವನ್ನು ಮಾಡಿಕೊಡುವಂತೆ ತಿಳಿಸಲಾಗಿದೆ. ಪದಗ್ರಹಣ ಸಮಾರಂಭ ನಂತರ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನ ಉದ್ಘಾಟನೆಗೆ ಮುಂದಿನ ಚಟುವಟಿಕೆಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಸಮಾಜ ಇಲಾಖೆ ಸಹಾಯಕ ನಿರ್ದೇಶಕ ಕಲ್ಯಾಣಾಧಿಕಾರಿ ಕೇಶವಮೂರ್ತಿ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಸ್ಮಾರಕ ಸಂಘಕ್ಕೆ ನೂತನ ಪದಾಧಿಕಾರಿಗಳು ಆಯ್ಕೆಯಾಗಿದ್ದಾರೆ. ಈ ಹಿನ್ನೆಲೆ ಮೇ 11 ರಂದು ಪದಗ್ರಹಣ ಕಾರ್ಯಕ್ರಮವನ್ನು ಅಂಬೇಡ್ಕರ್ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಡಾ.ಬಿ.ಆರ್. ಅಂಬೇಡ್ಕರ್ ಭವನವನ್ನು ವ್ಯವಸ್ಥಿತವಾಗಿ ಸಜ್ಜುಗೊಳಿಸಲು ಪದಾಧಿಕಾರಿಗಳು ಹಾಗೂ ಮುಖಂಡರ ಜತೆ ಪರಿಶೀಲಿಸಲಾಗಿದೆ ಎಂದರು.
ಕೆಆರ್‌ಡಿಐಎಲ್ ಎಇಇ ಚಿಕ್ಕಲಿಂಗಯ್ಯ ಮಾತನಾಡಿ, ಸಮಾರಂಭ ಹಿನ್ನೆಲೆ ಸಂಘದ ಪದಾಧಿಕಾರಿಗಳು ಭವನ ಹಾಗೂ ಆವರಣದಲ್ಲಿರುವ ಗಿಡಗಂಟಿಗಳನ್ನು ಸ್ವಚ್ಛತೆ ಗೊಳಿಸಬೇಕೆಂದು ತಿಳಿಸಿದ್ದು. ಅಂತೆಯೇ, ಸ್ವಚ್ಛತೆ ಮಾಡಿ ಕೊಡುವುದಾಗಿ ತಿಳಿಸಿದರು.
ಡಾ.ಬಿ.ಆರ್.ಅಂಬೇಡ್ಕರ್ ಸ್ಮಾರಕ ಸಂಘದ ಉಪಾಧ್ಯಕ್ಷ ಎಸ್. ಕಿರಣ್, ಕಾರ್ಯದರ್ಶಿ ಎಂ.ಪಾಪಣ್ಣ, ಸಹ ಕಾರ್ಯದರ್ಶಿ ಶಶಿಕುಮಾರ್, ಖಜಾಂಚಿ ಕೆ.ರಾಜೇಶ್, ಮುಖಂಡರಾದ ಮಣಿ, ಎಸ್.ಸಿದ್ದಪ್ಪಾಜಿ, ದಿಲೀಪ್ ಸಿದ್ದಪ್ಪಾಜಿ, ಶಂಕರ್ ಚೇತನ್, ಶಿವರಾಳ, ಲಿಂಗರಾಜು ಮೇಸ್ತ್ರಿ, ಜಗದೀಶ್ ಇತರರು ಇದ್ದರು.