

ಮಂಡ್ಯ: ಡಾ.ಬಿ.ಆರ್.ಅಂಬೇಡ್ಕರ್ ಅವರು ಕಂಡಂತಹ ಕನಸಿನ ಅನುಗುಣವಾಗಿ ಹಾಗೂ ಸಂವಿಧಾನದ ಆಶಯಗಳಂತೆ ಪಣತೊಟ್ಟು ನಾವೆಲ್ಲರೂ ಬದುಕಬೇಕು. ಅಂತೆಯೇ ಅವರ ಚಿಂತನೆಗಳನ್ನು ಮಕ್ಕಳ ಮನಸ್ಸಿನಲ್ಲಿ ಬಿತ್ತಬೇಕು ಎಂದು ಶ್ರೀರಂಗಪಟ್ಟಣ ಬಿಜೆಪಿ ಮುಖಂಡ ಇಂಡುವಾಳು ಸಚ್ಚಿದಾನಂದ ಹೇಳಿದರು.
ನಗರದ ಕಾವೇರಿ ಉದ್ಯಾನದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ದೇಶ ಕಂಡಂತಹ ಹೊಸ ಶಕ್ತಿ ಹಾಗೂ ಚೇತನ. ದೇಶಕ್ಕೆ ಅತಿ ದೊಡ್ಡ ಸಂವಿಧಾನವನ್ನು ಕೊಟ್ಟಂತಹ ಪುಣ್ಯಾತ್ಮರು. ಅವರು ನೀಡಿರುವ ಸಂವಿಧಾನದ ಅಡಿಯಲ್ಲಿ ನಾವೆಲ್ಲರೂ ಜೀವಿಸುತ್ತಿದ್ದು, ಅಂತಹ ಚೈತನ್ಯ ನಮ್ಮ ದೇಶಕ್ಕೆ ಧಕ್ಕಿದ್ದು ನಮ್ಮೆಲ್ಲರ ಪುಣ್ಯವಾಗಿದೆ ಎಂದರು.
ಬೇಲೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಯತ್ತಗದಹಳ್ಳಿ ಸಂಜು, ಮಂಗಲ ರಮೇಶ್, ಬಿಜೆಪಿ ರೈತ ಮೋರ್ಚಾ ತಾಲೂಕು ಅಧ್ಯಕ್ಷ ಹನಿಯಂಬಾಡಿ ಸತೀಶ್ ಇತರರಿದ್ದರು.