

ವಿಜಯವಾಣಿ ಸುದ್ದಿಜಾಲ ಧಾರವಾಡ
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ವಿಶ್ವ ವಿದ್ಯಾಲಯದ ಸರ್. ಸಿದ್ದಪ್ಪ ಕಂಬಳಿ ಕಾನೂನು ಕಾಲೇಜಿನ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಫೆ. 7ರಂದು ಕಾಲೇಜಿನ ಸಭಾಭವನದಲ್ಲಿ ಡಾ. ಬಿ.ಆರ್.ಅಂಬೇಡ್ಕರ ಓದು ಕಾರ್ಯಕ್ರಮ ಆಯೋಜಿಸಲಾಗಿದೆ.
ಚಿಂತಕ ಶಂಕರ ಹಲಗತ್ತಿ ಕಾರ್ಯಕ್ರಮ ಉದ್ಘಾಟಿಸುವರು. ಸಾಹಿತಿ ಡಾ. ಸದಾಶಿವ ಮರ್ಜಿ ಉಪನ್ಯಾಸ ನೀಡುವರು. ಕಾಲೇಜಿನ ಪ್ರಾಚಾರ್ಯೆ ಡಾ. ಮಂಜುಳಾ ಎಸ್.ಆರ್. ಅಧ್ಯಕ್ಷತೆ ವಹಿಸುವರು. ಯರಿನಾರಯಣಪುರದ ಶರೀಫ್ ದೊಡ್ಡಮನಿ ಮತ್ತು ತಂಡದಿಂದ ಜಾಗೃತಿ ಗೀತೆಗಳ ಗಾಯನ ನಡೆಯಲಿದೆ.
ಗಾಯನ, ಪ್ರಬಂಧ ಸ್ಪರ್ಧೆ, ಭಾಷಣ ಸ್ಪರ್ಧೆ, ಕವನ ವಾಚನ ಸ್ಪರ್ಧೆ, ರಸಪ್ರಶ್ನೆ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಗುವುದು ಎಂದು ಕುಮಾರ ಬೆಕ್ಕೇರಿ ತಿಳಿಸಿದ್ದಾರೆ.