ಅಂಬೇಡ್ಕರ್ ಪ್ರತಿಮೆ ಭಗ್ನಗೊಳಿಸಿದವರ ಬಂಧಿಸಿ

Ambedkar Statue
Published on

ದೇವದುರ್ಗ: ಹೊಸಕೋಟೆ ತಾಲೂಕಿನ ಸೂಲಿಬೆಲೆ ಹೋಬಳಿಯ ಯನಗುಂಟಿ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಬೆಂಕಿಹಚ್ಚಿ ಅಪಮಾನ ಮಾಡಿದ ಕಿಡಿಗೇಡಿಗಳನ್ನು ಬಂಧಿಸಿ ಕಠಿಣಕ್ರಮ ವಹಿಸುಸುವಂತೆ ಒತ್ತಾಯಿಸಿ ತಹಸೀಲ್ದಾರ್ ಕೆ.ವೈ.ಬಿದರಿಗೆ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಶುಕ್ರವಾರ ಮನವಿ ಸಲ್ಲಿಸಿತು.

ಯನಗುಂಟಿ ಗ್ರಾಮದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪ್ರತಿಮೆಯನ್ನು ಭಗ್ನಗೊಳಿಸಿರುವುದು ನಾಗರಿಕ ಸಮಾಜ ತಲೆತಗ್ಗಿಸುವ ಕೃತ್ಯವಾಗಿದೆ. ಕೂಡಲೇ ಆರೋಪಿಗಳನ್ನು ಬಂಧಿಸಿ ಗಡಿಪಾರು ಮಾಡಬೇಕು.

ಮುಂದಿನ ದಿನಗಳಲ್ಲಿ ಇಂಥ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆ ಮುಂಜಾಗ್ರತೆ ವಹಿಸಬೇಕು ಎಂದು ಆಗ್ರಹಿಸಿದರು. ತಾಲೂಕು ಅಧ್ಯಕ್ಷ ಮಲ್ಲಪ್ಪ ಗೌಡೂರು, ಉಪಾಧ್ಯಕ್ಷ ಮರೆಪ್ಪ ಬಾಗೂರು, ಬಸವರಾಜ ಬಾವಿಮನಿ, ಅಮಾತೇಪ್ಪ ಜೋಳದಹೆಡಗಿ, ದುರುಗಪ್ಪ ಸಮುದ್ರ, ಮಹಾದೇವಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net