ಸೆ.22ರಂದು ನಗರದಲ್ಲಿ ವಾರ್ಷಿಕ ಮಹಾಸಭೆ: ಸಂಘದ ನಿರ್ವಹಣಾ ಸಮಿತಿ ಸದಸ್ಯ ಗುರುಶಂಕರ್ ಮಾಹಿತಿ

Ambedkar Universal Co-operative Society press conference Mandya
Published on

ಮಂಡ್ಯ: ಅಂಬೇಡ್ಕರ್ ವಿವಿದ್ದೋದ್ದೇಶ ಸಹಕಾರ ಸಂಘದ 2023-24ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಸೆ.22ರಂದು ಬೆಳಗ್ಗೆ 10ಗಂಟೆಗೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ನಿರ್ವಹಣಾ ಸಮಿತಿ ಸದಸ್ಯ ಗುರುಶಂಕರ್ ತಿಳಿಸಿದರು.

ಉರಿಲಿಂಗ ಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ, ಚಾಮರಾಜನಗರದ ನಳಂದ ವಿಶ್ವವಿದ್ಯಾಲಯದ ಬೋಧಿದತ್ತ ಬಂತೇಜಿ ಸಾನಿಧ್ಯದಲ್ಲಿ ಮಹಾಸಭೆಯನ್ನು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಉದ್ಘಾಟಿಸಲಿದ್ದು, ವಿಶೇಷ ಆಹ್ವಾನಿತರಾಗಿ ಶಾಸಕರಾದ ನರೇಂದ್ರಸ್ವಾಮಿ, ರವಿಕುಮಾರ್ ಗಣಿಗ, ಬಹುಜನ ಸಮಾಜ ಪಕ್ಷದ ಮುಖಂಡ ಎಂ.ಕೃಷ್ಣಮೂರ್ತಿ ಭಾಗವಹಿಸಲಿದ್ದಾರೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಇದೇ ಸಂದರ್ಭದಲ್ಲಿ ದ್ವಿತೀಯ ಪಿಯುಸಿ ಮತ್ತು ಎಸ್ಸೆಸ್ಸೆಲ್ಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದಿರುವ ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದರು. ನಿರ್ವಹಣಾ ಸಮಿತಿ ಸದಸ್ಯರಾದ ಜಯಶಂಕರ, ರಾಜೇಶ್, ಮುರುಗನ್, ಕುಮಾರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net