

ಮಂಡ್ಯ: ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದು, ಇದನ್ನು ತಡೆಯುವಲ್ಲಿ ಜಿಲ್ಲಾಡಳಿತ, ತಾಲೂಕು ಆಡಳಿತ ಹಾಗೂ ಸಂಬಂಧಿತ ಇಲಾಖೆ ವಿಫಲವಾಗಿದೆ. ಮಾತ್ರವಲ್ಲದೆ ಅಧಿಕಾರದ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಡಾ.ಬಿ.ಆರ್.ಅಂಬೇಡ್ಕರ್ ವಾರಿಯರ್ಸ್ ರಾಜ್ಯಾಧ್ಯಕ್ಷ ಎಚ್.ಜಿ.ಗಂಗರಾಜು ಆರೋಪ ಮಾಡಿದರು.
ನಾಗಮಂಗಲ ತಾಲೂಕಿನ ಹಲವೆಡೆ ಅಕ್ರಮ ಗಣಿಗಾರಿಕೆ ನಡೆಯುತ್ತಿರುವುದು ಪತ್ತೆಯಾಗಿದೆ. ಈ ಸಂಬಂಧ ಅಧಿಕಾರಿಗಳ ಗಮನಕ್ಕೆ ತಂದಿದ್ದು, ಯಾವುದೇ ಕ್ರಮಕೈಗೊಳ್ಳದ ಕಾರಣ ಲಿಖಿತ ರೂಪದಲ್ಲಿಯೂ ದೂರು ನೀಡಲಾಗಿದೆ. ಆದರೂ ಯಾವುದೇ ಕ್ರಮವಾಗಿಲ್ಲ. ಇತ್ತೀಚೆಗೆ ಜಿಲ್ಲಾಧಿಕಾರಿ ಮೂಲಕ ಸಿಎಂಗೂ ಮನವಿ ನೀಡಲಾಗಿದ್ದು, ಕ್ರಮ ವಹಿಸುವಂತೆ ಒತ್ತಾಯಿಸಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಭಾರತೀಯ ಬುದ್ಧ ಫೌಂಡೇಷನ್‌ನ ಜೆ.ರಾಮಯ್ಯ, ಸ್ವಾಭಿಮಾನಿ ಸಮಸಮಾಜದ ರಾಜ್ಯಾಧ್ಯಕ್ಷ ಎಚ್.ಎನ್.ನರಸಿಂಹಮೂರ್ತಿ, ಅಹಿಂದ ರಾಜ್ಯ ಸಂಚಾಲಕ ಎಂ.ಲೋಕೇಶ್, ಗ್ರಾ.ಪಂ ಮಾಜಿ ಸದಸ್ಯ ಕೆ.ಸಿ.ವೇಣುಗೋಪಾಲ್, ಸಂವಿಧಾನ ಬಳಗದ ಮುಖಂಡ ಅನಿಲ್‌ಕುಮಾರ್, ಮಹೇಶ್, ಅಭಿಗೌಡ, ಅಮ್ಜದ್ ಪಾಷ ಇದ್ದರು.