ಮಹಿಳೆಯರಿಗೆ ಸಮಾನತೆ ತಂದು ಕೊಟ್ಟ ಮಹಾನ್ ವ್ಯಕ್ತಿ ಅಂಬೇಡ್ಕರ್

06 yelandur 01
ಯಳಂದೂರು ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ಭವನದ ಮುಂಭಾಗ ಇರುವ ಅಂಬೇಡ್ಕರ್ ಪುತ್ಥಳಿಗೆ ಬುಧವಾರ ಅಂಬೇಡ್ಕರ್‌ರ 67 ನೇ ಪರಿನಿಬ್ಬಾಣ ದಿನಾಚರಣೆ ನಿಮಿತ್ತ ಪುಷ್ಪಾರ್ಚನೆ ಸಲ್ಲಿಸಲಾಯಿತು.
Published on

ಯಳಂದೂರು: ಸಂವಿಧಾನದ ಮೂಲಕ ದೇಶದಲ್ಲಿ ಮಹಿಳೆಯರಿಗೆ ಸಮಾನತೆ ತಂದುಕೊಟ್ಟ ಮಹಾನ್ ವ್ಯಕ್ತಿ ಡಾ.ಬಿ.ಆರ್.ಅಂಬೇಡ್ಕರ್ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ತಿಳಿಸಿದರು.

ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ಭವನದ ಮುಂಭಾಗದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್‌ರ ಪುತ್ಥಳಿಗೆ ಬುಧವಾರ ಪುಷ್ಪಾರ್ಚನೆ ಸಲ್ಲಿಸಿ 67 ನೇ ಪರಿನಿಬ್ಬಾಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಪರಿಶಿಷ್ಟ ಜಾತಿ, ವರ್ಗ, ಹಿಂದುಳಿದ ವರ್ಗಗಳಿಗೆ ಅಂಬೇಡ್ಕರ್ ನೀಡಿದ ಕೊಡುಗೆಯಿಂದ ಇಂದು ಎಲ್ಲರೂ ಸಮಾನರಾಗಿ ಬದುಕುವಂತಾಗಿದೆ. ಇಂದು ಮಹಿಳೆಯರಿಗೆ ಆಸ್ತಿಯಲ್ಲೂ ಸಮಪಾಲು ದೊರೆಯುವಂತಾಗಿರುವುದು ಸಂವಿಧಾನದಿಂದ ಎಂಬುದನ್ನು ನಾವು ಅರಿತುಕೊಳ್ಳಬೇಕು ಎಂದರು.
ತಹಶೀಲ್ದಾರ್ ಜಯಪ್ರಕಾಶ್, ಪಪಂ ಮುಖ್ಯಾಧಿಕಾರಿ ಮಹೇಶ್‌ಕುಮಾರ್, ಸದಸ್ಯರಾದ ಮಹೇಶ್, ವೈ.ಜಿ. ರಂಗನಾಥ, ಮಂಜು, ಮಹದೇವನಾಯಕ, ಸವಿತಾ ಬಸವರಾಜು, ಸುಶೀಲಾ ಪ್ರಕಾಶ್, ಬಿ. ರವಿ, ದಸಂಸ ಜಿಲ್ಲಾ ಸಂಚಾಲಕ ಯರಿಯೂರು ರಾಜಣ್ಣ, ಕಂದಹಳ್ಳಿ ನಾರಾಯಣ, ನೇತ್ರಾವತಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಪ್ರಗತಿಪರ ಸಂಘಟನೆಗಳ ಸದಸ್ಯರು ಇದ್ದರು.

ವಿವಿಧೆಡೆ ಪರಿನಿಬ್ಬಾಣ ದಿನಾಚರಣೆ: ಪಟ್ಟಣದ ಕಂದಾಯ ಇಲಾಖೆಯ ಕಚೇರಿ, ಸೆಸ್ಕ್ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಸೇರಿದಂತೆ ವಿವಿಧಡೆ, ತಾಲೂಕಿನ ಗ್ರಾಮ ಪಂಚಾಯಿತಿಗಳು, ಸರ್ಕಾರಿ ಕಚೇರಿಗಳು, ಸಂಘಸಂಸ್ಥೆಗಳೂ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಬುಧವಾರ ಅಂಬೇಡ್ಕರ್ ಪರಿನಿಬ್ಬಾಣ ದಿನಾಚರಣೆಯನ್ನು ಆಚರಿಸಲಾಯಿತು. ಇದರ ನಿಮಿತ್ತ ಅಂಬೇಡ್ಕರ್ ಭಾವಚಿತ್ರದ ಮುಂಭಾಗ ಮೊಂಬತ್ತಿ ಬೆಳಗಿಸಿ, ಪುಷ್ಪಾರ್ಚನೆ ಮಾಡಲಾಯಿತು. ಅಂಬೇಡ್ಕರ್ ವಿಚಾರಧಾರೆಗಳ ಬಗ್ಗೆ ತಿಳಿಹೇಳಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net