ಬಾಬಾಸಾಹೇಬರಿಗೆ ಪೂಜೆ ಸಲ್ಲಿಸಿದ ಡಾ.ಶರಣಪ್ರಕಾಶ ಪಾಟೀಲ್, ಡಾ.ಅಜಯ ಧರ್ಮಸಿಂಗ್, ಡಿಸಿ ಫೌಜಿಯಾ ತರನ್ನುಮ್

IMG-20250414-WA0016
Published on

ಕಲಬುರಗಿ:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಸಮಾಜ ಕಲ್ಯಾಣ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕಲಬುರಗಿ ಇವರ ಸಂಯುಕ್ತಾಶ್ರಯದಲ್ಲಿ ಜಗತ್ ವೃತ್ತದಲ್ಲಿರುವ ಸಂವಿಧಾನ ಶಿಲ್ಪಿ-ಭಾರತ ರತ್ನ ಡಾ. ಬಾಬಾ ಸಾಹೇಬ ಅಂಬೇಡ್ಕರರವರ ೧೩೪ ನೇ ಜಯಂತ್ಯೋತ್ಸವ ಅಂಗವಾಗಿ ಜಗತ್ ವೃತ್ತದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ ರವರ ಪ್ರತಿಮೆಗೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಇಲಾಖೆ ಸಚಿವರಾದ ಡಾ. ಶರಣಪ್ರಕಾಶ ಪಾಟೀಲ, ಕೆಕೆಆರ್ ಡಿಬಿ ಅದ್ಯಕ್ಷರಾದ ಶಾಸಕ ಡಾ.ಅಜಯ ಧರ್ಮಸಿಂಗ್, ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಮತ್ತು ಬೀದರ ಬುದ್ಧವಿಹಾರ ಪೂಜ್ಯ ಭಂತೆ ವರಜ್ಯೋತಿ ಅವರು ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

ಕಲಬುರಗಿ ನಗರ ಸೇರಿದಂತೆ ಜಿಲ್ಲೆಯ ಎಲ್ಲಡೆ ಸಂಭ್ರಮದಿಂದ ಡಾ.ಅಂಬೇಡ್ಕರ್ ಜಯಂತಿ ಆಚರಿಸಲಾಯಿತು. ಬಾಬಾಸಾಹೇಬರ ತತ್ವಾದರ್ಶಗಳನ್ನು ಮೈಗೂಡಿಸಿಕೊಂಡು ಹೊಸ ಸಮಾಜ ನಿರ್ಮಿಸಲು ಮುಂದಾಗುವಂತೆ ಕರೆ ನೀಡಿದರು.

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ. ಅಜಯಸಿಂಗ್, ದಕ್ಷಿಣ ಮತಕ್ಷೇತ್ರದ ಶಾಸಕರಾದ ಅಲ್ಲಮ ಪ್ರಭು ಪಾಟೀಲ, ವಿಧಾನ ಪರಿಷತ್ತ ಶಾಸಕರಾದ ತಿಪ್ಪಣ್ಣಪ್ಪ ಕಮಕನೂರ, ಜಗದೇವ ಗುತ್ತೇದಾರ ಮಹಾನಗರ ಪಾಲಿಕೆ ಮಹಪೌರರಾದ ಯಲ್ಲಪ್ಪ ನಾಯ್ಕೋಡಿ, ಗ್ಯಾರೆಂಟಿ ಯೋಜನಾ ಸಮಿತಿಯ ಅಧ್ಯಕ್ಷೆ ಚಂದ್ರಿಕಾ ಪರಮೆಶ್ವರ, ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಸುಂದರೇಶ ಬಾಬು, ಪೋಲಿಸ್ ಆಯುಕ್ತರ ಡಾ. ಶರಣಪ್ಪ ಎಸ್.ಡಿ, ಎಸ್.ಪಿ. ಅಡ್ಡೂರು ಶ್ರೀನಿವಾಸಲು, ಮಹಾನಗರ ಪಾಲಿಕೆಯ ಆಯುಕ್ತರಾದ ಅವಿನಾಶ ಶಿಂಧೆ, ಕಲಬುರಗಿಯ ಪೂಜ್ಯ ಅನಿರುದ್ಧ ಭಂತೆ, ಪೂಜ್ಯ ಸುದಮ್ಮ ಭಂತೆ, ಜಯಂತ್ಯೋತ್ಸವ ಸಮಿತಿ ಅಧ್ಯಕ್ಷ ವಾಸು ಎಸ್. ವಂಟಿ, ಸಮಾಜ ಕಲ್ಯಾಣ ಇಲಾಖೆ ಅಪರ ನಿರ್ದೇಶಕ ಎಂ.ಎಸ್. ಅಲ್ಲಾಬಕಾಷ, ಎಸ್‌ಸಿ/ಎಸ್‌ಟಿ ನೌಕರರ ಸಂಘದ ಅಧ್ಯಕ್ಷರಾದ ಮಹೇಶ ಹುಬಳಿ, ಮಹಿಳಾ ಪದವಿ ಮಹಾವಿದ್ಯಾಲಯ ಗೋದುತಾಯಿ ದೊಡಪ್ಪ ಅಪ್ಪ ಪ್ರಾಂಶುಪಾಲರಾದ ಡಾ. ಪುಟ್ಟಮಣಿ ದೇವಿದಾಸ. ಸಮಾಜ ಮುಖಂಡರಾದ ಅಂಬಾರಾಯ ಅಷ್ಟಗಿ, ಸೇರಿದಂತೆ ಕಲಬುರಗಿ ಜಿಲ್ಲೆಯ ಸಮಸ್ತ ಜನಪ್ರತಿನಿಧಿಗಳು ಡಾ.ಬಾಬಾ ಸಾಹೇಬ ಅಂಬೇಡ್ಕರ ಜಯಂತ್ಯೋತ್ಸವ ಆಚರಣೆ ಸಮಿತಿ ಎಲ್ಲಾ ಸದಸ್ಯರು ಸಂಘ ಸಂಸ್ಥೆಗಳು ಪದಾಧಿಕಾರಿಗಳು ಗಣ್ಯವ್ಯಕ್ತಿಗಳು. ಜಿಲ್ಲಾಮಟ್ಟದ ಅಧಿಕಾರಿಗಳು ಮಹಿಳೆಯರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net