

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ
ಸಮಾಜ, ಮಹಿಳೆಯರ ಅಸಮಾನತೆ ವಿರುದ್ಧ ಹೋರಾಡಿದವರು ಡಾ.ಬಾಬಾ ಸಾಹೇಬ್ ಅಂಬೇಡ್ಕರ್. ಅವರ ಜೀವನವ ನಮಗೆ ಆದರ್ಶವಾಗಿದ್ದು, ಅವರು ರಚಿಸಿದ ಸಂವಿಧಾನದಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಜಾರಿಯಾಗಿದೆ. ಇದು ಡಾ.ಅಂಬೇಡ್ಕರ್ ಅವರ ಕೊಡುಗೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.
ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲೂಕುಮಟ್ಟದ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆ ಕಾರ್ಯಕ್ರಮ ಸೋಮವಾರ ಉದ್ಘಾಟಿಸಿ ಮಾತನಾಡಿದರು.
ಮುಂಡಾಜೆ ಮುರಾರ್ಜಿ ದೇಸಾಯಿ ವಸತಿ ಶಾಲೆ ಶಿಕ್ಷಕ ಅರವಿಂದ ಚೊಕ್ಕಾಡಿ ಮಾತನಾಡಿದರು. ತಹಸೀಲ್ದಾರ್ ಪೃಥ್ವಿಸಾನಿಕಂ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಪದ್ಮನಾಭ ಸಾಲ್ಯಾನ್, ತಾಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ರಾಜೇಶ್, ಸಮಾಜ ಕಲ್ಯಾಣ ಇಲಾಖಾಧಿಕಾರಿ ಧನಂಜಯ ಉಪಸ್ಥಿತರಿದ್ದರು.
ತಾಲೂಕಿನ ಸಮಾಜ ಕಲ್ಯಾಣ ಇಲಾಖೆ ಕಾಲೇಜು ವಿದ್ಯಾರ್ಥಿನಿಲಯದಲ್ಲಿ ಇದ್ದುಕೊಂಡು ಈ ಸಾಲಿನ ದ್ವಿತೀಯ ಪಿಯುಸಿಯಲ್ಲಿ ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಮುಂಡಾಜೆ ಮುರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ಮುರಳಿಧರ ಸ್ವಾಗತಿಸಿದರು. ತಾಪಂ ಸಂಯೋಜಕ ಜಯಾನಂದ್ ವಂದಿಸಿದರು. ಸಮಾಜ ಕಲ್ಯಾಣ ಇಲಾಖೆಯ ಹೇಮಲತಾ, ಆಶಾಪೂರ್ಣಿಮಾ ಕಾರ್ಯಕ್ರಮ ನಿರೂಪಿಸಿದರು.
ತಾಲೂಕು ಕ್ರೀಡಾಂಗಣದಲ್ಲಿ ಮೂರು ಎಕರೆ ಜಾಗದಲ್ಲಿ ಅಂಬೇಡ್ಕರ್ ಭವನ ನಿರ್ಮಿಸಲು ಉದ್ದೇಶಿಸಿ ಹಿಂದಿನ ಸರ್ಕಾರ ಎಂಟು ಕೋಟಿ ರೂ. ಅನುದಾನ ಮಂಜೂರಾತಿ ಮಾಡಿದ್ದು ಅದನ್ನು ಈಗಿನ ಸರ್ಕಾರ ತಡೆ ಹಿಡಿದಿದೆ. ಈ ಬಗ್ಗೆ ಸಂಬಂಧಪಟ್ಟ ಸಚಿವರಲ್ಲಿ ಅನುದಾನ ಬಿಡುಗಡೆ ಮಾಡುವಂತೆ ವಿನಂತಿಸಲಾಗಿದ್ದು, ಮುಂದಿನ ಮೂರು ವರ್ಷದೊಳಗೆ ಬಿಡುಗಡೆ ಮಾಡುವ ವಿಶ್ವಾಸವಿದೆ. ಹರೀಶ್ ಪೂಂಜ ಶಾಸಕ https://www.vijayavani.net/farewell-ceremony-11 https://www.vijayavani.net/inauguration-of-the-new-building-and-auditorium-of-vani-educational-institutions