ದೇಶಕ್ಕೆ ಅಂಬೇಡ್ಕರ್ ಕೊಡುಗೆ ಅಪಾರ

Ambedkar's contribution to the country is immense
ಬಾಡಗಂಡಿ ಎಸ್.ಆರ್. ಪಾಟೀಲ ಆಸ್ಪತೆ ಹಾಗೂ ಸಂಶೋಧನಾ ಕೇಂದ್ರದಲ್ಲಿ ನೆಡೆದ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಡೀನ್ ಧರ್ಮರಾಯ ಇಂಗಳೆ, ಪ್ರವೀಣ ಕಂಠಿ, ಡಾ. ಎಂ.ಬಿ. ಸಾಲದಳ್ಳಿ, ಲೀಲಾ ಧನುಡೆ ಇತರರಿದ್ದರು.
Published on

ಬೀಳಗಿ: ದೇಶದಲ್ಲಿ ಸಮಾನತೆಯ ಸಮಾಜ ನಿರ್ಮಾಣಕ್ಕಾಗಿ ಅತ್ಯುತ್ತಮ ಸಂವಿಧಾನ ರಚಿಸಿಕೊಟ್ಟ ಮಹಾನ್ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಕೊಡುಗೆ ಅಪಾರವಾಗಿದೆ ಎಂದು ಎಸ್.ಆರ್. ಪಾಟೀಲ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದ ಡೀನ್ ಧರ್ಮರಾಯ ಇಂಗಳೆ ಹೇಳಿದರು.

ಬಾಡಗಂಡಿ ಎಸ್.ಆರ್. ಪಾಟೀಲ ಹಾಗೂ ಸಂಶೋಧನಾ ಕೇಂದ್ರದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಡಾ. ಬಾಬಾ ಸಾಹೇಬ ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು.

ಡಾ. ಅಂಬೇಡ್ಕರ್ ಬರೆದ ಸಂವಿಧಾನವು ವಿಶ್ವಕ್ಕೆ ಮಾದರಿಯಾಗಿದೆ ಎಂದರು. ಪ್ರವೀಣ ಕಂಠಿ, ಡಾ. ಎಂ.ಬಿ. ಸಾಲದಳ್ಳಿ, ಲೀಲಾ ಧನುಡೆ, ಮುತ್ತರಾಜ ಚಿಕ್ಕಲಕಿ, ರವೀಂದ್ರ ಘಂಟಿ ಹಾಗೂ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net